ಪಂಜಾಬ್‌ ನಲ್ಲಿ ಅಕಾಲಿಕ ಮಳೆ: ರೈತರಿಗೆ ಎದುರಾಗಿದೆ ಬೆಳೆ ನಷ್ಟದ ಭೀತಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪಂಜಾಬ್‌ನ ಹಲವು ಭಾಗಗಳಲ್ಲಿ ಅಕಾಲಿಕ ಮಳೆಯಾಗಿದ್ದು, ರೈತರಲ್ಲಿ ಬೆಳೆ ನಷ್ಟದ ಭೀತಿ ಎದುರಾಗಿದೆ.

ರಾಜ್ಯದ ಬಟಿಂಡಾ, ಫಜಿಲ್ಕಾ, ಲೂಧಿಯಾನಾ, ಪಟಿಯಾಲಾ, ಅಮೃತಸರ ಹಾಗೂ ಪಠಾಣ್‌ಕೋಟ್‌ ಭಾಗಗಳಲ್ಲಿ ಜೋರಾಗಿ ಮಳೆ ಸುರಿದಿದೆ.
ಇತ್ತ ಗೋಧಿಯ ಕೊಯ್ಲು ಏ. 1ರಿಂದ ಆರಂಭವಾಗಲಿದೆ. ಈ ಸಮಯದಲ್ಲಿ ಸುರಿದಿರುವ ಅಕಾಲಿಕ ಮಳೆಯಿಂದಾಗಿ ರೈತರಲ್ಲಿ ಆತಂಕ ಮನೆ ಮಾಡಿದೆ.

ಬಿರುಗಾಳಿ ಮತ್ತು ಜೋರಾದ ಮಳೆಗೆ ಗೋಧಿ ಬೆಳೆ ನೆಲ ಕಚ್ಚಿದೆ. ಇದರ ಕೊಯ್ಲು ಮಾಡುವುದು ಕಷ್ಟದ ಕೆಲಸ. ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ’ ಎಂದು ಬಟಿಂಡಾದ ರೈತರು ಅಳಲು ತೋಡಿಕೊಂಡಿದ್ದಾರೆ.

‘ರಾಜ್ಯದ ಮಾಲ್ವಾ ಪ್ರಾಂತ್ಯದಲ್ಲಿ ಸುರಿದ ಅಕಾಳಿಕ ಮಳೆಗೆ ಗೋಧಿ ಬೆಳೆ ಹಾನಿಗೀಡಾಗಿದೆ. ಕೆಲ ದಿನಗಳ ಹಿಂದೆಯೂ ಆಲಿಕಲ್ಲು ಸಹಿತ ಮಳೆ ಸುರಿದು ರೈತರ ನೆಮ್ಮದಿ ಹಾಳು ಮಾಡಿತ್ತು. ಹೀಗಾಗಿ ತಕ್ಷಣ ಬೆಳೆ ನಷ್ಟದ ಸಮೀಕ್ಷೆ ನಡೆಸಲು ಆದೇಶಿಸಬೇಕು. ಜತೆಗೆ ರೈತರಿಗೆ ಮಧ್ಯಂತರ ಪರಿಹಾರವನ್ನು ತಕ್ಷಣವೇ ಬಿಡುಗಡೆ ಮಾಡಬೇಕು’ ಎಂದು ಮುಖ್ಯಮಂತ್ರಿ ಭಗವಂತ ಮಾನ್ ಅವರನ್ನು ಶಿರೋಮಣಿ ಅಕಾಲಿದಳ ಒತ್ತಾಯಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!