ಕೊರೋನಾ ಲಸಿಕೆ ಪಡೆಯದ 15-18 ವರ್ಷದ ಮಕ್ಕಳಿಗಿಲ್ಲ ಶಾಲಾ ಪ್ರವೇಶ: ಹರಿಯಾಣ ಸರ್ಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೊರೋನಾ ಲಸಿಕೆ ಪಡೆಯದ 15-18 ವರ್ಷದ ಮಕ್ಕಳಿಗೆ ಶಾಲೆಯೊಳಗೆ ಪ್ರವೇಶವಿಲ್ಲ ಎಂದು ಹರಿಯಾಣ ಸರ್ಕಾರ ತಿಳಿಸಿದೆ.
ಕಳೆದ ಕೆಲದಿನಗಳಿಂದ ರಾಜ್ಯದಲ್ಲಿ ಕೊರೋನಾ ಹೆಚ್ಚಾಗಿರುವುದರಿಂದ ಶಾಲೆಗಳನ್ನು ಮುಚ್ಚಲಾಗಿದೆ.
ಜ.3ರಿಂದ ಶಾಲಾ ಮಕ್ಕಳಿಗೆ ಲಸಿಕಾಭಿಯಾನ ಆರಂಭಗೊಂಡಿದ್ದು, ಎಲ್ಲ ಮಕ್ಕಳು ಲಸಿಕೆ ಪಡೆಯುವಂತೆ ಸರ್ಕಾರ ಮನವಿ ಮಾಡಿದೆ. ಹಾಗಾಗಿ ಲಸಿಕೆ ಹಾಕಿಸಿಕೊಳ್ಳದ ಮಕ್ಕಳಿಗೆ ಶಾಲೆಗಳು ಮತ್ತೆ ತೆರೆದಾಗ ಶಾಲೆಯೊಳಗೆ ಪ್ರವೇಶಿಸಲು ಅನುಮತಿ ನೀಡಲಾಗುವುದಿಲ್ಲ ಎಂದು ಆರೋಗ್ಯ ಸಚಿವ ಅನಿಲ್ ವಿಜ್ ಹೇಳಿದ್ದಾರೆ.
ಈ ನಿಟ್ಟಿನಲ್ಲಿ ಎಲ್ಲಾ ಮಕ್ಕಳ ಪೋಷಕರು ತಮ್ಮ ಮಕ್ಕಳಿಗೆ ಶೀಘ್ರ ಲಸಿಕೆ ಹಾಕಿಸಬೇಕು ಎಂದು ತಿಳಿಸಿದ್ದಾರೆ. ಹರಿಯಾಣದಲ್ಲಿ 15-18 ವರ್ಷ ವಯಸ್ಸಿನ 15 ಲಕ್ಷ ಸೋಂಕಿತರು ಲಸಿಕೆ ಪಡೆಯಲು ಅರ್ಹರಿದ್ದಾರೆ. ಜಿಲ್ಲೆಗೆ ಇಬ್ಬರು ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!