ನಿವೃತ್ತಿ ಜೀವನ ಆರಂಭ ಘಟ್ಟದಲ್ಲಿ ಸಿಕ್ಕಿದ ಬಯಸದೇ ಬಂದ ಭಾಗ್ಯ: ಎಸ್.ಎಂ.ಕೃಷ್ಣ ಸಂತಸ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರಿಗೆ ಪದ್ಮ ವಿಭೂಷಣ ಪ್ರಶಸ್ತಿ ಘೋಷಣೆಯಾಗಿದ್ದು, ಈ ಕುರಿತು ಸ್ವತಃ ಅವರೇ ಖುಷಿ ವ್ಯಕ್ತಪಡಿಸಿದ್ದಾರೆ.

ನಾನು ರಾಜಕೀಯ ನಿವೃತ್ತಿ ಜೀವನ ಆರಂಭ ಮಾಡುತ್ತಿರುವ ಘಟ್ಟದಲ್ಲಿ ನನಗೆ ಪದ್ಮ ವಿಭೂಷಣ ಪ್ರಶಸ್ತಿ (Padma Vibhushan Award) ಬಂದಿರುವುದು ಬಯಸದೇ ಬಂದ ಭಾಗ್ಯ ಎಂದು ಸಂಭ್ರಮಿಸಿದ್ದಾರೆ.

ಪದ್ಮ ವಿಭೂಷಣ ಘೋಷಣೆಯಾಗಿರುವುದಕ್ಕೆ ಬಹಳ ಸಂತೋಷ ಆಗುತ್ತಿದೆ. ನಾನು ರಾಜಕೀಯ ನಿವೃತ್ತಿ ಜೀವನ ಆರಂಭ ಮಾಡುತ್ತಿರುವ ಘಟ್ಟದಲ್ಲಿ ನನಗೆ ಈ ಪ್ರಶಸ್ತಿ ಬಂದಿರುವುದು ಬಯಸದೇ ಬಂದ ಭಾಗ್ಯವಾಗಿದೆ. ಈ ಪ್ರಶಸ್ತಿಯನ್ನು ಕಳೆದ 6 ದಶಕದಲ್ಲಿ ನನಗೆ ಬೆಂಬಲಿಸಿದ 7 ಕೋಟಿ ಕನ್ನಡಿಗರಿಗೆ ನಮ್ರತೆಯಿಂದ ಅರ್ಪಿಸುತ್ತೇನೆ ಎಂದು ಹೇಳಿದರು.

ಪ್ರಧಾನಿಯವರಿಗೆ ಹಾಗೂ ಗೃಹ ಸಚಿವರಿಗೆ ಋಣಿಯಾಗಿದ್ದೇನೆ ಮತ್ತೆ ನನ್ನ ಅನಂತ ನಮಸ್ಕಾರಗಳನ್ನು ಸಲ್ಲಿಸುತ್ತೇನೆ. ಇದು ನನಗೆ ಬಹಳ ಸಂತೋಷವಾಗಿದೆ. ನನ್ನ ರಾಜಕೀಯ ನಿವೃತ್ತಿಯೊಂದಿಗೆ ನನ್ನ ಆಸೆ ಆಕಾಂಕ್ಷೆಗಳು ನಿವೃತ್ತವಾಗಿವೆ. ಪ್ರಶಸ್ತಿಯ ಆಯ್ಕೆಯ ಮಾನದಂಡ ಆಯಾ ಕಾಲಘಟ್ಟದಲ್ಲಿ ಕಾಲಘಟ್ಟಕ್ಕೆ ತಕ್ಕಂತೆ ಬದಲಾಗಿದೆ ಎಂದು ಅಭಿಪ್ರಾಯಪಟ್ಟರು.

ಇತ್ತೀಚೆಗಷ್ಟೆ ನಾನು ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದೇನೆ. ಅದರ ಸಮೀಪದಲ್ಲೇ ಈ ಪ್ರಶಸ್ತಿ ಬಂದಿದೆ. ನನಗೆ ಬಹಳ ಸಂತೋಷ ಉಂಟುಮಾಡಿದೆ. 6 ದಶಕಗಳಿಂದ ರಾಜಕೀಯವಾಗಿ ಸಾಕಿ, ಸಲಹಿ, ಆಶೀರ್ವಾದ ಮಾಡಿದ ಕನ್ನಡದ 7 ಕೋಟಿ ಜನರಿಗೆ ನಮ್ರತೆಯಿಂದ ಸಮರ್ಪಣೆ ಮಾಡುತ್ತೇನೆ ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!