Tuesday, June 28, 2022

Latest Posts

ದೇವರ ದರ್ಶನ ಮಾಡಿಕೊಂಡು ಬರುತ್ತಿದ್ದವರು ಸೇರಿದ್ದು ಮಸಣಕ್ಕೆ..!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಉತ್ತರ ಪ್ರದೇಶದ ಪಿಲಿಭಿತ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಭಕ್ತಾದಿಗಳನ್ನು ಸಾಗಿಸುತ್ತಿದ್ದ ಟ್ರಕ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 10 ಮಂದಿ ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ.

ಭಕ್ತರು ಹರಿದ್ವಾರದಿಂದ ಯುಪಿಯ ಲಖಿಂಪುರಕ್ಕೆ ಹಿಂತಿರುಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಮೂಲಗಳು ವರದಿ ಮಾಡಿವೆ. ಗಜರೌಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ. ಇಂದು ಬೆಳಿಗಿನ ಜಾವ 4:30ರ ಸುಮಾರಿಗೆ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಪ್ರಯಾಣಿಕರ ಕುಟುಂಬಗಳನ್ನು ಸಂಪರ್ಕಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss