ಅತಿಕ್ ಪುತ್ರನ ಎನ್‌ಕೌಂಟರ್‌: ಕಾನೂನು ಮತ್ತು ಸುವ್ಯವಸ್ಥೆ ಕುರಿತು ಯುಪಿ ಸಿಎಂ ತುರ್ತು ಸಭೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದರೋಡೆಕೋರ- ರಾಜಕಾರಣಿ ಅತೀಕ್ ಅಹ್ಮದ್ ಅವರ ಪುತ್ರ ಅಸದ್ ಅವರನ್ನು ಎನ್‌ಕೌಂಟರ್‌ನಲ್ಲಿ ಹತ್ಯೆ ಘಟನೆ ನಡೆದ ಬೆನ್ನಲ್ಲೇ ನಂತರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಗುರುವಾರ ‘ಕಾನೂನು ಮತ್ತು ಸುವ್ಯವಸ್ಥೆ’ ಕುರಿತು ಉನ್ನತ ಮಟ್ಟದ ಸಭೆ ನಡೆಸಿದರು.

ಶೂಟೌಟ್‌ನಲ್ಲಿ ಭಾಗಿಯಾಗಿರುವ ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ತಂಡವನ್ನು ಸಿಎಂ ಯೋಗಿ ಶ್ಲಾಘಿಸಿದರು. “ಮಾಜಿ ಸಂಸದ ಅತೀಕ್ ಅಹ್ಮದ್ ಅವರ ಪುತ್ರ ಅಸದ್ ಮತ್ತು ಅವರ ಸಹಾಯಕನ ಎನ್‌ಕೌಂಟರ್ ನಂತರ, ಸಿಎಂ ಯೋಗಿ ಆದಿತ್ಯನಾಥ್ ಕಾನೂನು ಮತ್ತು ಸುವ್ಯವಸ್ಥೆ ಕುರಿತು ಸಭೆ ನಡೆಸಿದರು. ಸಿಎಂ ಯೋಗಿ ಯುಪಿ ಎಸ್‌ಟಿಎಫ್ ಜೊತೆಗೆ ಡಿಜಿಪಿ, ವಿಶೇಷ ಡಿಜಿ ಕಾನೂನು ಮತ್ತು ಸುವ್ಯವಸ್ಥೆ ಮತ್ತು ಇಡೀ ತಂಡವನ್ನು ಶ್ಲಾಘಿಸಿದ್ದಾರೆ” ಎಂದು ಯುಪಿ ಸಿಎಂಒ ಹೇಳಿದೆ.

ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸಂಜಯ್ ಪ್ರಸಾದ್ ಅವರು ಎನ್‌ಕೌಂಟರ್ ಬಗ್ಗೆ ಸಿಎಂಗೆ ಮಾಹಿತಿ ನೀಡಿದ್ದಾರೆ. ಈ ಸಂಪೂರ್ಣ ವಿಷಯದ ಕುರಿತು ಸಿಎಂ ಮುಂದೆ ವರದಿ ಸಲ್ಲಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಝಾನ್ಸಿಯಲ್ಲಿ ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಅತೀಕ್ ಅಹ್ಮದ್ ಅವರ ಪುತ್ರ ಅಸದ್ ಹತನಾಗಿದ್ದಾನೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

“ಮಾಫಿಯಾದಿಂದ ರಾಜಕಾರಣಿಯಾಗಿ ಬದಲಾದ ಅತೀಕ್ ಅಹ್ಮದ್ ಮತ್ತು ಗುಲಾಮ್ ಎಸ್/ಒ ಮಕ್ಸೂದನ್ ಅವರ ಪುತ್ರ ಅಸಾದ್ ವಿರುದ್ಧ ಉಮೇಶ್ ಪಾಲ್ ಹತ್ಯೆ ಪ್ರಕರಣದಲ್ಲಿ ಅವರ ತಲೆಗೆ ಐದು ಲಕ್ಷ ರೂಪಾಯಿ ಬಹುಮಾನವನ್ನು ಘೋಷಿಸಲಾಗಿತ್ತು.  ಅತ್ಯಾಧುನಿಕ ವಿದೇಶಿ ನಿರ್ಮಿತ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಯುಪಿ ಎಸ್ಟಿಎಫ್ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!