Saturday, July 2, 2022

Latest Posts

ಕಚೇರಿ ಸಿಬ್ಬಂದಿಗೆ ಕೊರೋನಾ ಸೋಂಕು: ಐಸೊಲೇಷನ್ ನಲ್ಲಿ ಯುಪಿ ಸಿಎಂ ಯೋಗಿ ಆದಿತ್ಯನಾಥ್

ಹೊಸದಿಗಂತ ಆನ್ ಲೈನ್ ಡೆಸ್ಕ್:

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರ ಕಚೇರಿಯ ಸಿಬ್ಬಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಈ ಹಿನ್ನೆಲೆ ಸಿಎಂ ಯೋಗಿ ಪ್ರತ್ಯೇಕ ವಾಸದಲ್ಲಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನನ್ನ ಸಂಪರ್ಕದಲ್ಲಿದ್ದ ಕಚೇರಿಯ ಕೆಲವು ಅಧಿಕಾರಿಗಳಿಗೆ ಕೊರೋನಾ ಸೋಂಕು ತಗುಲಿದೆ. ಈ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ನಾನು ಪ್ರತ್ಯೇಕವಾಸದಲ್ಲಿರುತ್ತೇನೆ. ನನ್ನ ಕೆಲಸಗಳನ್ನು ವರ್ಚುವಲ್ ನಲ್ಲಿ ನಡೆಸುತ್ತೇನೆ ಎಂದು ತಿಳಿಸಿದ್ದಾರೆ.

ನಿನ್ನೆ ರಾಜ್ಯದಲ್ಲಿ 18 ಸಾವಿರಕ್ಕೂ ಹೆಚ್ಚು ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು 95,980 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss