ಯುಪಿ ಸಿಎಂ ಯೋಗಿ ಆದಿತ್ಯನಾಥ್ ಡೀಪ್‌ಫೇಕ್ ವೀಡಿಯೋ ಶೇರ್ ಮಾಡಿದ ಆರೋಪ: ಓರ್ವ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಡೀಪ್‌ಫೇಕ್ (Deep Fake) ವೀಡಿಯೋವನ್ನು ಪೋಸ್ಟ್ ಮಾಡಿ ಶೇರ್ ಮಾಡಿದ ಆರೋಪದ ಮೇಲೆ ಯುಪಿ (Uttar Pradesh) ಎಸ್‌ಟಿಎಫ್ (STF) ತಂಡ ಓರ್ವನನ್ನು ಬಂಧಿಸಿದೆ .

ದೇಶ ವಿರೋಧಿ ಅಂಶಗಳನ್ನು ಬಲಪಡಿಸಲು ಈ ವಿಡಿಯೋವನ್ನು ಬಳಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಮಿತಾಬ್ ಯಶ್ ಹೇಳಿದ್ದಾರೆ. ಮೇ 1ರಂದು ಉತ್ತರ ಪ್ರದೇಶ ಮುಖ್ಯಮಂತ್ರಿಯ ಎಐ ಡೀಪ್‌ಫೇಕ್ ವೀಡಿಯೋವನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಬಳಿಕ ಇದು ವೈರಲ್ ಆಗಿದೆ ಎಂದು ಯಶ್ ತಿಳಿಸಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 468 (ವಂಚನೆಗಾಗಿ ಫೋರ್ಜರಿ), 505(2) (ಸಾರ್ವಜನಿಕ ಕಿಡಿಗೇಡಿತನದ ಹೇಳಿಕೆ) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ನೋಯ್ಡಾ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದ್ದು, ಎಸ್‌ಟಿಎಫ್ ಈ ಬಗ್ಗೆ ತನಿಖೆ ಆರಂಭಿಸಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!