ಯುಪಿ ಸಿಎಂ ಯೋಗಿ ಆದಿತ್ಯನಾಥ್ ಡೀಪ್‍ ಫೇಕ್ ವೀಡಿಯೋ ವೈರಲ್: ಎಫ್‌ಐಆರ್ ದಾಖಲು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರ ಪ್ರದೇಶ (Uttar Pradesh) ಸಿಎಂ ಯೋಗಿ ಆದಿತ್ಯನಾಥ್ (Yogi Adityanath) ಅವರ ಡೀಪ್‍ ಫೇಕ್ ವೀಡಿಯೋ ವೈರಲ್ ಆಗಿದ್ದು, ಇದರ ಬೆನ್ನಲ್ಲೇ ಲಕ್ನೋದ ಸೈಬರ್ ಪೊಲೀಸ್ (Police) ಠಾಣೆಯಲ್ಲಿ 2 ಎಫ್‍ಐಆರ್‌ಗಳು ದಾಖಲಾಗಿವೆ.

ಡೀಪ್‍ ಫೇಕ್ ವಿಡಿಯೋದಲ್ಲಿ ಯೋಗಿ ಆದಿತ್ಯನಾಥ್ ಅವರ ಚಿತ್ರ ಬಳಸಿ ಔಷಧ ಖರೀದಿಸುವಂತೆ ಮನವಿ ಮಾಡಲಾಗುತ್ತಿದೆ. ಮಧುಮೇಹ ಔಷಧವನ್ನು ಪ್ರಚಾರ ಮಾಡಲು ಯೋಗಿಯವರ ಚಿತ್ರವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ. ಇದಲ್ಲದೇ ಮತ್ತೊಂದು ವೀಡಿಯೋದಲ್ಲಿ ಯೋಗಿ ಆದಿತ್ಯನಾಥ್ ಅವರ ಹೆಸರಿನಲ್ಲಿ ಮತ್ತೊಂದು ಔಷಧಿ ಖರೀದಿಸುವಂತೆ ಮನವಿ ಮಾಡಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ಫೇಸ್‍ಬುಕ್ ಕೇಂದ್ರ ಕಚೇರಿಯಿಂದ ಮಾಹಿತಿ ಕೇಳಿದ್ದಾರೆ. ಪ್ರಕರಣದ ತನಿಖೆಗಾಗಿ ಎರಡು ತಂಡಗಳನ್ನು ರಚಿಸಲಾಗಿದೆ.

ಕೆಲ ತಿಂಗಳುಗಳ ಹಿಂದೆ ಅನೇಕ ನಟ, ನಟಿಯರ ಡೀಪ್‍ಫೇಕ್ ವೀಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿತ್ತು. ಆರಂಭದಲ್ಲಿ ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್‍ ಫೇಕ್ ವೀಡಿಯೋ ವೈರಲ್ ಆಗಿತ್ತು. ಈ ಸಂಬಂಧ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!