ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಉಭಯ ನಾಯಕರು ಭೇಟಿಯಾದ ಫೋಟೊವನ್ನು ಪ್ರಧಾನ ಮಂತ್ರಿ ಕಚೇರಿ (ಪಿಎಂಒ) ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದೆ.
ಒಂದು ದೇಶ ಒಂದು ಚುನಾವಣೆ ಮತ್ತು ರಾಮಮಂದಿರ ನಿರ್ಮಾಣದ ಪ್ರಗತಿಗೆ ಸಂಬಂಧಿಸಿ ಉಭಯ ನಾಯಕರು ಚರ್ಚೆ ನಡೆಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.