ಯುಪಿ ಸಿಎಂ ಯೋಗಿ ಆದಿತ್ಯನಾಥ್ ಭೇಟಿ ಮಾಡಿದ ‘ದಿ ಕೇರಳ ಸ್ಟೋರಿ’ ತಂಡ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದೇಶದಲ್ಲಿ ಸದ್ಯ ಸುದ್ದಿಯಲ್ಲಿ ಇರುವ ‘ದಿ ಕೇರಳ ಸ್ಟೋರಿ’ ಚಿತ್ರವನ್ನು ಮಧ್ಯಪ್ರದೇಶದಲ್ಲಿ ತೆರಿಗೆ ಮುಕ್ತಗೊಳಿಸಿದ ನಂತರ ಯುಪಿಯಲ್ಲೂ ತೆರಿಗೆ ಮುಕ್ತಗೊಳಿಸಲಾಗಿದೆ.

ಇದೀಗ ಚಿತ್ರತಂಡ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಬುಧವಾರ ಭೇಟಿ ಮಾಡಿದೆ. ಸಿಎಂ ಜೊತೆಗಿನ ಸಭೆಯಲ್ಲಿ ಸಿನಿಮಾವನ್ನು ತೆರಿಗೆ ಮುಕ್ತಗೊಳಿಸಿದಕ್ಕೆ ಧನ್ಯವಾದ ಹೇಳುವುದರ ಜೊತೆಗೆ ಚಿತ್ರದ ಕಥೆಯ ಬಗ್ಗೆಯೂ ನಿರ್ಮಾಪಕರು ಸಿಎಂ ಜೊತೆ ಚರ್ಚೆ ನಡೆಸಿದ್ದಾರೆ.

ದಿ ಕೇರಳ ಸ್ಟೋರಿ ಚಿತ್ರಕ್ಕೆ ಕೆಲವು ರಾಜ್ಯಗಳಲ್ಲಿ ವಿರೋಧ ವ್ಯಕ್ತವಾಗುತ್ತಿದ್ದು, ಇನ್ನು ಕೆಲವು ರಾಜ್ಯಗಳಲ್ಲಿ ಸಿನಿಮಾವನ್ನು ತೆರಿಗೆ ಮುಕ್ತಗೊಳಿಸುವ ಮೂಲಕ ಬೆಂಬಲಿಸಲಾಗುತ್ತಿದೆ. ಒಂದೆಡೆ ಪಶ್ಚಿಮ ಬಂಗಾಳದಲ್ಲಿ ಚಿತ್ರ ಪ್ರದರ್ಶನಕ್ಕೆ ಸಂಪೂರ್ಣ ನಿಷೇಧ ಹೇರಲಾಗಿದೆ. ಮತ್ತೊಂದೆಡೆ ತಮಿಳುನಾಡಿನ ಥಿಯೇಟರ್ ಮಾಲೀಕರು ಚಿತ್ರ ಪ್ರದರ್ಶಿಸದಿರಲು ನಿರ್ಧರಿಸಿದ್ದಾರೆ. ಮತ್ತೊಂದೆಡೆ, ಮಧ್ಯಪ್ರದೇಶದ ನಂತರ ಉತ್ತರ ಪ್ರದೇಶವು ಈ ಚಿತ್ರವನ್ನು ತೆರಿಗೆ ಮುಕ್ತಗೊಳಿಸುವ ಮೂಲಕ ಬೆಂಬಲಿಸಿದೆ.

ಕೇರಳ ಸ್ಟೋರಿಯನ್ನು ಬೆಂಬಲಿಸಿ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ಇಡೀ ಕ್ಯಾಬಿನೆಟ್‌ನೊಂದಿಗೆ ಚಿತ್ರವನ್ನು ವೀಕ್ಷಿಸುವುದಾಗಿ ಘೋಷಿಸಿದ್ದಾರೆ. ಇದಲ್ಲದೆ, ಯುಪಿ ಉಪ ಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಅವರು ಚಲನಚಿತ್ರವನ್ನು ತೆರಿಗೆ ಮುಕ್ತಗೊಳಿಸುವ ನಿರ್ಧಾರವನ್ನು ಸ್ವಾಗತಿಸಿದ್ದಾರೆ.

‘ದಿ ಕೇರಳ ಸ್ಟೋರಿ’ ಚಿತ್ರದ ಟ್ರೈಲರ್ ಬಿಡುಗಡೆಯಾದ ನಂತರ ವಿವಾದ ಪ್ರಾರಂಭವಾಗಿತು. ಕೇರಳದಿಂದ 32,000 ಮಹಿಳೆಯರು ನಾಪತ್ತೆಯಾಗಿದ್ದಾರೆ ಮತ್ತು ಭಯೋತ್ಪಾದಕ ಗುಂಪು ಐಸಿಸ್ ಸೇರಿದ್ದಾರೆ ಎಂದು ಟ್ರೇಲರ್‌ನಲ್ಲಿ ಹೇಳಾಗಿತ್ತು. ಇದರ ಬೆನ್ನಲ್ಲಿಯೇ ರಾಜಕೀಯ ಚರ್ಚೆ ಕೂಡ ಆರಂಭವಾಗಿದ್ದರಿಂದ 32 ಸಾವಿರ ಜನರು ನಾಪತ್ತೆಯಾಗಿದ್ದಾರೆ ಎನ್ನುವ ಅಂಶದ ಕುರಿತು ಸತ್ಯಾಸತ್ಯತೆಯನ್ನು ಪ್ರಶ್ನೆ ಮಾಡಿದ್ದಾರೆ. ಬಳಿಕ ಕೇರಳ ಮುಖ್ಯಮಂತ್ರಿ ಪಿಣರಾಯಿವಿಜಯನ್‌ ಈ ಚಿತ್ರ ಸುಳ್ಳು ಸಂಗತಿಯನ್ನು ತಿಳಿಸುತ್ತಿದೆ ಎಂದು ಹೇಳಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!