Thursday, June 1, 2023

Latest Posts

ಯುಪಿ ಸಿಎಂ ಯೋಗಿ ಆದಿತ್ಯನಾಥ್​ಗೆ ಬೆದರಿಕೆ ಕರೆ: ಅನಾಮಿಕನ ವಿರುದ್ಧ ಕೇಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಜೀವ ಬೆದರಿಕೆ ಕರೆ ಬಂದಿದ್ದು, ಲಖನೌದಲ್ಲಿ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

‘ಡಯಲ್ 112’ (ಉತ್ತರ ಪ್ರದೇಶ ಸರ್ಕಾರವು ತುರ್ತು ಸೇವೆಗಳಿಗಾಗಿ ಪ್ರಾರಂಭಿಸಿರುವ ಸಂಖ್ಯೆ) ನಂಬರ್‌ಗೆ ಸಂದೇಶ ಕಳುಹಿಸುವ ಮೂಲಕ ಬೆದರಿಕೆ ಹಾಕಲಾಗಿದೆ. ಈ ಕರೆಯನ್ನು ಅಲ್ಲಿದ್ದ ಸಂವಹನಕಾರರು ಸ್ವೀಕರಿಸಿದ್ದಾರೆ. ಆ ಕಡೆಯಿಂದ ಕರೆ ಮಾಡಿದ ವ್ಯಕ್ತಿ “ನಾನು ಸಿಎಂ ಯೋಗಿಯನ್ನು ಶೀಘ್ರದಲ್ಲೇ ಕೊಲ್ಲುತ್ತೇನೆ” ಎಂದು ಹೇಳಿದ್ದಾನೆ ಎಂದು ತಿಳಿದು ಬಂದಿದೆ. ಬೆದರಿಕೆ ಬಂದ ನಂತರ ‘112’ ನ ಆಪರೇಷನ್ ಕಮಾಂಡರ್ ಸುಶಾಂತ್ ಗಾಲ್ಫ್ ಸಿಟಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಿಸಿದ್ದಾರೆ.

ಪೊಲೀಸರು ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 506 ಮತ್ತು 507 ಮತ್ತು ಐಟಿ ಕಾಯ್ದೆ 66 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!