SHOCKING | ಯುಪಿ ಸಿಎಂ ಯೋಗಿ ಆದಿತ್ಯನಾಥ್ ಬೆಂಗಾವಲು ವಾಹನ ಪಲ್ಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಉತ್ತರ ಪ್ರದೇಶದ ಲಕ್ನೋದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಬೆಂಗಾವಲು ವಾಹನವು ಪಲ್ಟಿಯಾಗಿದ್ದು, ಒಂಬತ್ತು ಜನರು ಗಾಯಗೊಂಡಿದ್ದಾರೆ.

ಅಪಘಾತದಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಐವರು ಪೊಲೀಸ್ ಸಿಬ್ಬಂದಿಗಳಿಗೆ ಗಾಯಗೊಂಡಿದ್ದಾರೆ.

ಸಿಎಂ ಯೋಗಿ ಆದಿತ್ಯನಾಥ್ ಅವರ ಬೆಂಗಾವಲು ಮುಂಭಾಗದಲ್ಲಿ ಚಲಿಸುತ್ತಿದ್ದ ಆಂಟಿ-ಡೆಮೊ ಕಾರು ಪಲ್ಟಿಯಾಗಿದೆ. ರಸ್ತೆಯಲ್ಲಿ ಬಿದ್ದಿದ್ದ ಪ್ರಾಣಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

ಘಟನೆಯಲ್ಲಿ ರಸ್ತೆ ಬದಿಯಲ್ಲಿ ನಿಂತಿದ್ದ 4 ಜನರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!