ಟ್ವಿಟರ್‌ನಲ್ಲಿ 25 ಮಿಲಿಯನ್‌ಗೂ ಹೆಚ್ಚು ಫಾಲೋಯರ್ಸ್ ಹೊಂದಿದ ಮೊದಲ ಸಿಎಂ ‌ಯೋಗಿ ಆದಿತ್ಯನಾಥ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಸಾಮಾಜಿಕ ಜಾಲತಾಣಗಳಲ್ಲಿ ಜನಪ್ರಿಯತೆಯ ಹೊಸ ದಾಖಲೆಯನ್ನು ಸೃಷ್ಟಿಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಅಧಿಕೃತ ಟ್ವಿಟರ್ ಖಾತೆಯಲ್ಲಿ 25 ಮಿಲಿಯನ್‌ಗೂ ಹೆಚ್ಚು ಫಾಲೋವರ್ಸ್ ಹೊಂದಿದ್ದಾರೆ ಎಂದು ಮುಖ್ಯಮಂತ್ರಿಗಳ ಕಚೇರಿಯ ಹೇಳಿಕೆ ಬುಧವಾರ ತಿಳಿಸಿದೆ.

ಸಿಎಂ ಯೋಗಿಯ ಜನಪ್ರಿಯತೆ ಎಲ್ಲೆ ಮೀರಿರುವುದು ಗಮನಾರ್ಹ. ಇದು ಯುಪಿ ಮಾತ್ರವಲ್ಲದೆ ದೇಶದ ದೊಡ್ಡ ನಾಯಕರು ಮತ್ತು ಸೆಲೆಬ್ರಿಟಿಗಳಿಗೆ ಇಲ್ಲಿಯವರೆಗೆ ತಲುಪಲು ಸಾಧ್ಯವಾಗದ ಅಂಕಿ ಅಂಶವಾಗಿದೆ.

ಈ ಮೂಲಕ ಟ್ವಿಟರ್‌ನಲ್ಲಿ ಹೆಚ್ಚು ಜನಪ್ರಿಯತೆ ಹೊಂದಿದ ಮೊದಲ ಸಿಎಂ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಎಂಟು ವರ್ಷಗಳ ಅವಧಿಯಲ್ಲಿ ಸಿಎಂ ಯೋಗಿ ಈ ಸಾಧನೆ ಮಾಡಿದ್ದಾರೆ ಎನ್ನುವುದು ವಿಶೇಷ.

ಸಿಎಂ ಯೋಗಿ ಆದಿತ್ಯನಾಥ್‌ ಅವರು ಸೆಪ್ಟೆಂಬರ್ 2015 ರಲ್ಲಿ ಟ್ವಿಟರ್‌ನಲ್ಲಿ ತಮ್ಮ ಅಧಿಕೃತ ಖಾತೆನ್ನು ತೆರೆದರು. 2017 ರಲ್ಲಿ ಉತ್ತರ ಪ್ರದೇಶದಲ್ಲಿ ಅಧಿಕಾರ ವಹಿಸಿಕೊಂಡ ನಂತರ, ರಾಜ್ಯದಲ್ಲಿ ಅಭಿವೃದ್ಧಿ ಮತ್ತು ಉತ್ತಮ ಆಡಳಿತದ ಜೊತೆಗೆ ಕಾನೂನು ಹಾಗೂ ಸುವ್ಯವಸ್ಥೆವನ್ನು ಕಾಪಾಡುವಲ್ಲಿ ವ್ಯಾಪಕವಾದ ಸುಧಾರಣೆಗಳನ್ನು ತೋರಿದ ರೀತಿ ಅವರ ಜನಪ್ರಿಯತೆಗೆ ಕಾರಣವಾಗಿದೆ.

ಟ್ವಿಟರ್‌ನಲ್ಲಿ 25 ಮಿಲಿಯನ್‌ಗೂ ಹೆಚ್ಚು ಅನುಯಾಯಿಗಳೊಂದಿಗೆ, ಯೋಗಿ ಅವರು ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಂತಹ ಹಿರಿಯ ನಾಯಕರನ್ನು ಒಳಗೊಂಡಿರುವ ಸಾಮಾಜಿಕ ವೇದಿಕೆಯ ಭಾಗವಾಗಿದ್ದಾರೆ.

ಸಿಎಂ ಯೋಗಿ ಆಫ್‌ಲೈನ್ ಮತ್ತು ಆನ್‌ಲೈನ್‌ನಲ್ಲಿ ಜನರೊಂದಿಗೆ ಸಂವಹನ ನಡೆಸುತ್ತಿರುವುದು ಗಮನಾರ್ಹವಾಗಿದೆ. ಮುಖ್ಯಮಂತ್ರಿಗಳು ಎಲ್ಲಾ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿದ್ದಾರೆ. ಕೂ ಆ್ಯಪ್‌ನಲ್ಲಿ ಅವರು ಹೆಚ್ಚಿನ ಸಂಖ್ಯೆಯ ಅನುಯಾಯಿಗಳನ್ನು ಹೊಂದಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಅತ್ಯಂತ ಸಕ್ರಿಯ ಮುಖ್ಯಮಂತ್ರಿ ಮತ್ತು ರಾಜಕಾರಣಿ ಎಂದು ಹೆಸರುವಾಸಿಯಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!