ಕರಿಕಲ್ಲ ನಾಡಿನಲ್ಲಿ ಯುಪಿ ಸಿಎಂ ಬೃಹತ್ ರೋಡ್ ಶೋ: ಎಲ್ಲೆಡೆ ಕೇಳಿಸಿತು ಯೋಗಿ ಜಯಘೋಷ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯ ಚುನಾವಣಾ ಅಖಾಡದಲ್ಲಿರುವ ಉತ್ತರ ಪ್ರದೇಶ ಸಿಎಂ ಯೋಗಿ ಅವರು ಕಾರ್ಕಳದ ನಗರದ ಅನಂತಶಯನದಿಂದ ಶ್ರೀ ವೆಂಕಟರಮಣ ದೇವಸ್ಥಾನದ ವರೆಗೆ ಶನಿವಾರ ಬೃಹತ್‌ ರೋಡ್‌ ಶೋ ನಡೆಸಿದರು.

ಈ ವೇಳೆ ರಸ್ತೆಯ ಇಕ್ಕೆಲಗಳಲ್ಲಿ ನಿಂತಿದ್ದ ಜನಸ್ತೋಮ ಯೋಗಿ ಯೋಗಿ ಎಂದು ಘೋಷಣೆ ಮೊಳಗಿಸಿದರು.

ಈ ವೇಳೆ ಮಾತನಾಡಿದ ಯೋಗಿ, ಪ್ರಭು ಶ್ರೀರಾಮನ ಭಕ್ತನಾಗಿರುವ ನಾನು ಬಜರಂಗಿಯ ಜನ್ಮ ಸ್ಥಳಕ್ಕೆ ಬಂದಿದ್ದೇನೆ. ಹನುಮಂತನು ಶ್ರೀಲಂಕ ಹೋಗಿ ಅಧರ್ಮದ ಕಾರ್ಯವನ್ನು ಸಮಾಪ್ತಿಗೊಳಿದಂತೆ ಕರ್ನಾಟಕದ ಮತದಾರರು ಕಾಂಗ್ರೆಸ್ ಜೆಡಿಎಸ್‌ ನ ಅಧರ್ಮಕ್ಕೆ ಪೂರ್ಣವಿರಾಮ ಹಾಕಬೇಕಿದೆ ಎಂದರು.

ಡಬಲ್ ಇಂಜಿನ್ ಸರಕಾರ ಅಧಿಕಾರಕ್ಕೆ ಬರುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಭಾರತವು ಎಲ್ಲ ಕ್ಷೇತ್ರದಲ್ಲೂ ಅಭಿವೃದ್ದಿ ಹೊಂದುತ್ತಿದೆ. ಐಟಿ ಹಬ್ ಮೂಲಕ ಕರ್ನಾಟಕವೂ ಭಾರತದ ಅಭಿವೃದ್ಧಿಯಲ್ಲಿ ಮಹತ್ತರ ಕೊಡುಗೆ ನೀಡಿದೆ. ಕಾರ್ಕಳದ ಜನತೆ ರಾಷ್ಟ್ರೀಯವಾದಕ್ಕೆ ಬೆಂಬಲ ನೀಡಿದ್ದೀರಿ. ಈ ಬಾರಿಯೂ ಬಿಜೆಪಿ ಅಭ್ಯರ್ಥಿ ಸುನಿಲ್‌ ಕುಮಾರ್‌ ಅವರಿಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ ಮಾಡಿಕೊಂಡರು.

ರಾಮ ಮಂದಿರ ಲೋಕಾರ್ಪಣೆ
ಅಯೋಧ್ಯೆ ರಾಮ ಮಂದಿರ ನಿರ್ಮಾಣ ಕಾರ್ಯವು 2024ರಲ್ಲಿ ಪೂರ್ಣಗೊಳ್ಳಲಿದೆ. ಅದರ ಲೋಕಾರ್ಪಣಾ ಕಾರ್ಯಕ್ರಮಕ್ಕೆ ತಮ್ಮೆಲ್ಲರನ್ನೂ ಆಹ್ವಾನಿಸುತ್ತಿದ್ದೇನೆ. ಈಗಾಗಲೇ ಕರ್ನಾಟಕ ರಾಜ್ಯದ ಭಕ್ತರಿಗೆ ಗೆಸ್ಟ್ ಹೌಸ್ ಸ್ಥಾಪಿಸಲು ಬಿ.ಎಸ್. ಯಡಿಯೂರಪ್ಪ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ಅವರು ಅಯೋಧ್ಯೆ ಬಳಿ ಜಾಗ ಕಾಯ್ದಿರಿಸುವ ಕಾರ್ಯ ಮಾಡಿದ್ದಾರೆ ಎಂದು ಯೋಗಿ ಹೇಳಿದರು.

ಬಿಜೆಪಿ ರಾಜ್ಯಾ‍ಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌, ಸಚಿವ ವಿ. ಸುನಿಲ್‌ ಕುಮಾರ್‌, ಬಿಜೆಪಿ ಮುಖಂಡರಾದ ಬೋಳ ಪ್ರಭಾಕರ್‌ ಕಾಮತ್‌, ಎಂ.ಕೆ. ವಿಜಯ ಕುಮಾರ್‌, ಕ್ಷೇತ್ರಾಧ್ಯಕ್ಷ ಮಹಾವೀರ ಹೆಗ್ಡೆ, ಪ್ರಚಾರ ಸಮಿತಿ ಅಧ್ಯಕ್ಷ ಮಹೇಶ್‌ ಶೆಟ್ಟಿ ಕುಡುಪುಲಾಜೆ ಉಪಸ್ಥಿತರಿದ್ದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!