ನಾಳೆ ಉತ್ತರ ಪ್ರದೇಶ ಎಲೆಕ್ಷನ್: ಇಂದು ಪ್ರಣಾಳಿಕೆ ಬಿಡುಗಡೆ ಮಾಡಿದ ಕಾಂಗ್ರೆಸ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ನಾಳೆ ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆಯ ಮತದಾನ ನಡೆಯಲಿದ್ದು, ಇಂದು ಕಾಂಗ್ರೆಸ್‌ ರಾಜ್ಯದಲ್ಲಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದೆ.
ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಇಂದು ಲಖನೌನಲ್ಲಿ ತಮ್ಮ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ.
ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ ಮಾಡಲಾಗುವುದು. 20 ಲಕ್ಷ ಮಂದಿಗೆ ಉದ್ಯೋಗಾವಕಾಶ, ವಿದ್ಯುತ್‌ ಬಿಲ್‌ ಕಡಿತ, ಭತ್ತ ಹಾಗೂ ಗೋಧಿ ಖರೀದಿ ಬೆಲೆ ಏರಿಕೆ ಮಾಡಲಾಗುತ್ತದೆ ಎಂದು ಪ್ರಣಾಳಿಕೆಯಲ್ಲಿ ತಿಳಿಸಿದೆ.
ರಾಜ್ಯದಲ್ಲಿ ಈಗಾಗಲೇ ಬಿಜೆಪಿ ಮತ್ತು ಸಮಾಜವಾದಿ ಪಕ್ಷಗಳು ಈಗಾಗಲೇ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿ, ಹಲವು ಆಕರ್ಷಕ ಭರವಸೆಗಳನ್ನು ಜನರ ಮುಂದಿಟ್ಟಿದೆ.
ಬೆಳೆ ಹಾನಿ ಸಂಕಷ್ಟ ಅನುಭವಿಸಿದ ರೈತರಿಗೆ 3 ಸಾವಿರ ರೂ. ಪರಿಹಾರ, ಕೊವಿಡ್​ ವಾರಿಯರ್ಸ್​ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ, ತಾತ್ಕಾಲಿಕ ಶಿಕ್ಷಕರು ಮತ್ತು ಶಿಕ್ಷಾ ಮಿತ್ರರ ಖಾಯಂ ಮತ್ತು ಸಂಸ್ಕೃತ-ಉರ್ದು ಶಿಕ್ಷಕ ಹುದ್ದೆಗಳ ಭರ್ತಿ, ಎಸ್​ಸಿ, ಎಸ್​ಟಿ ವಿದ್ಯಾರ್ಥಿಗಳಿಗೆ ಪದವಿವರೆಗೂ ಉಚಿತ ಶಿಕ್ಷಣ ನೀಡಲಾಗುತ್ತದೆ ಎಂದು ಪ್ರಿಯಾಂಕಾ ವಾದ್ರಾ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!