ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು ಉತ್ತರ ಪ್ರದೇಶದಲ್ಲಿ ಅಖಿಲೇಶ್ ಯಾದವ್ ಪರ ಪ್ರಚಾರ ಮಾಡಲಿದ್ದಾರೆ.
ಚುನಾವಣಾ ಪ್ರಚಾರಕ್ಕೆಂದು ಸೋಮವಾರ ಲಖನೌಗೆ ಬಂದಿಳಿದ ಮಮತಾ ಬ್ಯಾನರ್ಜಿ ಇಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಪರ ಪ್ರಚಾರ ನಡೆಸಲಿದ್ದಾರೆ.
ಎಲ್ಲಾ ರಾಜ್ಯಗಳಲ್ಲೂ ಬಿಜೆಪಿಯನ್ನು ಸೋಲಿಸಬೇಕು, ಹಾಗಾಗಿ ಅಖಿಲೇಶ್ ಯಾದವ್ ನನ್ನನ್ನು ಕರೆದಿದ್ದಾರೆ ಎಂದು ಬಂಗಾಳ ಸಿಎಂ ಮಮತಾ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿದ ಅಖಿಲೇಶ್ ಯಾದವ್, ನಾವು ಒಟ್ಟಾಗಿ ಬಂಗಾಳದಲ್ಲಿ ಬಿಜೆಪಿಯನ್ನು ಸೋಲಿಸಿದ್ದೇವೆ. ಉತ್ತರ ಪ್ರದೇಶದಲ್ಲೂ
ನಾವು ಒಟ್ಟಾಗಿ ಅವರನ್ನು ಸೋಲಿಸುತ್ತೇವೆ. ನಾವು ಜಯಗಳಿಸುತ್ತೇವೆ ಎಂದು ದೀದಿಗೆ ಭರವಸೆ ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಮಮತಾ ವ್ಯಾನರ್ಜಿ ಹಾಗೂ ಅಖಿಲೇಶ್ ಯಾದವ್ ಇಬ್ಬರ ನಡುವೆಯೂ ರಾಜಕೀಯ ಹಾಗೂ ವೈಯಕ್ತಿಕ ಸಂಬಂಧ ಉತ್ತಮವಾಗಿದ್ದು, 2011ರಿಂದಲೂ ಇಬ್ಬರೂ ಜತೆಯಾಗಿ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ.