ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಏಪ್ರಿಲ್ 7 ರಂದು ಕೇಂದ್ರ ಆರೋಗ್ಯ ಸಚಿವ ಮನ್ಸುಕ್ ಮಾಂಡವಿಯಾ ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿತ ಆರೋಗ್ಯ ಸಚಿವರ ಜೊತೆ ತುರ್ತು ಸಭೆ ನಡೆಸಿದ್ದರು.
ಇದರ ಬೆನ್ನಲ್ಲೇ ಕೋವಿಡ್ ಗಣನೀಯ ಏರಿಕೆಯಾಗುತ್ತಿರುವ ರಾಜ್ಯಗಳು ಕಠಿಣ ನಿರ್ಬಂಧ ಜಾರಿಗೊಳಿಸುತ್ತಿದೆ. ಇದೀಗ ಉತ್ತರ ಪ್ರದೇಶ ಸರ್ಕಾರ, ವಿದೇಶದಿಂದ ಆಗಮಿಸುವ ಎಲ್ಲಾ ಪ್ರಯಾಣಿಕರ ಕೋವಿಡ್ ಪರೀಕ್ಷೆ ಕಡ್ಡಾಯ ಮಾಡಲಾಗಿದೆ.
ವಿದೇಶಿ ಪ್ರಯಾಣಿಕರ ಮಾದರಿ ಸಂಗ್ರಹಿಸಿ ಜಿನೋಮ್ ಸೀಕ್ವೆನ್ಸ್ ಪರೀಕ್ಷೆಗೆ ಕಳುಹಿಸುವಂತೆ ಉತ್ತರ ಪ್ರದೇಶ ಸರ್ಕಾರ ಮಾರ್ಗಸೂಚಿ ಹೊರಡಿಸಿದೆ. ಇದರಿಂದ ವಿದೇಶದಿಂದ ಆಗಮಿಸುವ ಎಲ್ಲಾ ಪ್ರಯಾಣಿಕರು ವಿಮಾನ ನಿಲ್ದಾಣದಲ್ಲಿ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಬೇಕು. ಇನ್ನು ಹೋಮ್ ಕ್ವಾರಂಟೈನ್, ಐಸೋಲೇಶನ್ ಸೇರಿದಂತೆ ಇತರ ನಿಯಮಗಳು ಜಾರಿಯಾಗಿದೆ.
ಭಾರತದ 7 ರಾಜ್ಯಗಳಲ್ಲಿ ಕೋವಿಡ್ ಗಣನೀಯ ಏರಿಕೆಯಾಗುತ್ತಿದೆ. ಸದ್ಯ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ. ಆದರೆ ಎಚ್ಚರಿಕೆ ವಹಿಸಲು ಕೇಂದ್ರ ಆರೋಗ್ಯ ಸಚಿವಾಲಯ ಸ್ಪಷ್ಟ ಸೂಚನೆ ನೀಡಿದೆ.