Friday, August 12, 2022

Latest Posts

‘ಬ್ರೇಕ್ ದಿ ಚೈನ್’ ನತ್ತ ಯುಪಿ ಸರಕಾರ: ಮೇ 17ರ ವರೆಗೆ ಲಾಕ್‌ಡೌನ್‌ ವಿಸ್ತರಿಸಿ ಆದೇಶ!

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿ ಕೋವಿಡ್‌-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮೇ 17ರ ವರೆಗೆ ಲಾಕ್‌ಡೌನ್‌ ವಿಸ್ತರಿಸಿ ಉತ್ತರ ಪ್ರದೇಶ ಸರ್ಕಾರ ಭಾನುವಾರ ಆದೇಶ ಹೊರಡಿಸಿದೆ.
ಸದ್ಯ ಜಾರಿಯಲ್ಲಿರುವ ಲಾಕ್‌ಡೌನ್‌ ಮೇ 10ರಂದು ಬೆಳಿಗ್ಗೆ 7ಕ್ಕೆ ಮುಕ್ತಾಯಗೊಳ್ಳುವುದು. ಹೀಗಾಗಿ, ಮೇ 17ರ ಬೆಳಿಗ್ಗೆ ವರೆಗೆ ಲಾಕ್‌ಡೌನ್ ವಿಸ್ತರಣೆ ಮಾಡಿ ಆದೇಶಿಸಲಾಗಿದೆ ಎಂದು ಸರ್ಕಾರದ ಹೆಚ್ಚುವರಿ ಮುಖ್ಯಕಾರ್ಯದರ್ಶಿ (ಮಾಹಿತಿ) ನವನೀತ್‌ ಸೆಹಗಲ್‌ ತಿಳಿಸಿದ್ದಾರೆ.
ಲಾಕ್‌ಡೌನ್‌ ನಿಂದ ಕೊರೋನಾ ಸೋಂಕು ಸರಪಳಿಯನ್ನು ತುಂಡರಿಸಲು ಸಾಧ್ಯವಿದ್ದು, ಕೆಲದಿನಗಳಿಂದ ಕೋವಿಡ್‌ ಪ್ರಕರಣಗಳಲ್ಲಿ ಇಳಿಕೆ ಕಂಡು ಬಂದಿರುವುದರಿಂದ ಲಾಕ್‌ಡೌನ್‌ ವಿಸ್ತರಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.
ಲಸಿಕೆ ಕಾರ್ಯಕ್ರಮ, ಕೈಗಾರಿಕೆ ಹಾಗೂ ವೈದ್ಯಕೀಯ ಸೇವೆಗೆ ಸಂಬಂಧಿಸಿದ ಚಟುವಟಿಕೆಗಳಿಗೆ ಅನುಮತಿ ನೀಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss