ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಶ್ವಕಪ್ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ನೀಡಿದ ಮೊಹಮ್ಮದ್ ಶಮಿ ಅವರು ಹುಟ್ಟೂರಿನಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಯುಪಿ ಸರ್ಕಾರ ಮುಂದಾಗಿದೆ.
ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯ ಸಹಾಸ್ಪುರ ಗ್ರಾಮದಲ್ಲಿ ಕ್ರೀಡಾಂಗಣ ನಿರ್ಮಾಣವಾಗಲಿದೆ. ಅಧಿಕಾರಿಗಳು ಈಗಾಗಲೇ ಸ್ಥಳ ಪರಿಶೀಲನೆ ಮಾಡಿದ್ದು, ಶೀಘ್ರವೇ ಕ್ರೀಡಾಂಗಣ ನಿರ್ಮಾಣವಾಗಲಿದೆ.
ಮಿನಿ ಕ್ರೀಡಾಂಗಣದ ಜೊತೆ ತೆರೆದ ಜಿಮ್ ಕೂಡ ಸೇರಿರಲಿದೆ. ಇದರಿಂದ ಸಾಕಷ್ಟು ಗ್ರಾಮೀಣ ಪ್ರತಿಭೆಗಳಿಗೆ ಸಹಾಯವಾಗಲಿದೆ. ಮನೆಯೊಳಗೆ ಕುಳಿತು ಆಡುವ ಬದಲು ಮಕ್ಕಳು ಫೀಲ್ಡ್‌ಗೆ ಇಳಿದು ಹೊರಾಂಗಣ ಕ್ರೀಡೆಗಳಲ್ಲಿ ತೊಡಗಿಕೊಳ್ಳಲು ಉತ್ತಮ ಅವಕಾಶವಾಗಿದೆ.