ಕೃಷ್ಣ ಜನ್ಮಭೂಮಿ ಮಥುರಾ ಸೇರಿ 14 ಪ್ರವಾಸಿ ಸ್ಥಳಗಳಿಗೆ ಹೊಸರೂಪ: ಉತ್ತರ ಪ್ರದೇಶ ಸಚಿವ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಉತ್ತರ ಪ್ರದೇಶ ಸರ್ಕಾರವು ರಾಜ್ಯದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು 14 ಪ್ರವಾಸಿ ಸರ್ಕ್ಯೂಟ್‌ಗಳನ್ನು ಅಭಿವೃದ್ಧಿಪಡಿಸಲಿದೆ ಎಂದು ಉತ್ತರ ಪ್ರದೇಶದ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಜಯವೀರ್ ಸಿಂಗ್ ಹೇಳಿದ್ದಾರೆ.
ನಾಲ್ಕು ದಿನಗಳ ಅಮೃತ ಸಂಗೀತ ಉತ್ಸವವನ್ನು ಉದ್ಘಾಟಿಸಿದ ಸಚಿವರು ಮಾತನಾಡಿ, ಭಗವಾನ್ ಕೃಷ್ಣನ ಜನ್ಮಸ್ಥಳವಾದ ಬ್ರಜ್ ಭೂಮಿಯನ್ನು, ಪ್ರಾಚೀನ ಸಂಸ್ಕೃತಿಯನ್ನು ಪ್ರದರ್ಶಿಸುವ ನಿಟ್ಟಿನಲ್ಲಿ ಸುಂದರವಾದ ಪ್ರವಾಸಿ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿದರು.
ಅಭಿವೃದ್ಧಿಪಡಿಸಲಾಗುತ್ತಿರುವ 14 ಪ್ರವಾಸಿ ಸರ್ಕ್ಯೂಟ್‌ಗಳಲ್ಲಿ ಒಂದನ್ನು ಹುತಾತ್ಮರಿಗೆ ಸಮರ್ಪಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ. ರಾಜ್ಯ ಸರ್ಕಾರವು ಪ್ರವಾಸಿ ಸ್ಥಳಗಳಲ್ಲಿ ಹೊಸ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುತ್ತದೆ. ಮತ್ತು ಜನರ ಸಹಕಾರದೊಂದಿಗೆ ಮಥುರಾಗೆ ಹೊಸ ರೂಪವನ್ನು ನೀಡುತ್ತದೆ ಎಂದು ಅವರು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!