ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ಮೋದಿಗೆ ಅವಹೇಳನ ಮಾಡಿದ್ದ ಆರೋಪಿ ಸೆರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವಹೇಳನ ಮಾಡಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಉತ್ತರ ಪ್ರದೇಶದ ಕುದ್ ಫತೇಘರ್ ಪ್ರದೇಶದ ದಾರಾಣಿ ಗ್ರಾಮದ ಇರ್ಫಾನ್ ಹುಸೇನ್ ಬಂಧಿತ ಆರೋಪಿ.
ಭಾರತೀಯ ಜನತಾ ಪಕ್ಷದ ಕಾರ್ಯಕರ್ತರ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಚಕ್ರೇಶ್ ಮಿಶ್ರಾ ತಿಳಿಸಿದ್ದಾರೆ.
ಫೇಸ್‌ಬುಕ್ ಪೋಸ್ಟ್‌ ಗಾಗಿ ಹುಸೇನ್ ಮೇಲೆ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 67 (ಅಶ್ಲೀಲ ವಸ್ತುಗಳನ್ನು ರವಾನಿಸುವುದು) ಮತ್ತು 153 ಎ (ಜನರಲ್ಲಿ ಅಸಂಗತತೆಯನ್ನು ಹರಡುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!