Wednesday, March 29, 2023

Latest Posts

ಮುಂಬೈ ಇಂಡಿಯನ್ಸ್‌ ಗೆಲುವಿನ ಓಟಕ್ಕೆ ಬ್ರೇಕ್ ಕೊಟ್ಟ ಯುಪಿ ವಾರಿಯರ್ಸ್‌!

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ಸತತ ಗೆಲುವಿನ ಹಾದಿಯಲ್ಲಿ ಸಾಗುತ್ತಿದ್ದ ಮುಂಬೈ ಇಂಡಿಯನ್ಸ್‌ಗೆ (Mumbai Indians) ಗೆ ಯುಪಿ ವಾರಿಯರ್ಸ್‌ ಬ್ರೇಕ್ ನೀಡಿದ್ದು, ಸೋಫಿ ಎಕ್ಲಿಸ್ಟೋನ್‌ ಮಿಂಚಿನ ಬೌಲಿಂಗ್‌ ಹಾಗೂ ಮೆಕ್‌ಗ್ರಾತ್‌, ಹ್ಯಾರಿಸ್‌ ಭರ್ಜರಿ ಬ್ಯಾಟಿಂಗ್‌ ನೆರವಿನಿಂದ ಯುಪಿ ವಾರಿಯರ್ಸ್‌ (UP Warriorz) 5 ವಿಕೆಟ್‌ಗಳ ರೋಚಕ ಜಯ ಸಾಧಿಸಿದೆ.

ಡಿವೈ ಪಾಟೀಲ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಹರ್ಮನ್‌ ಪ್ರೀತ್‌ ಕೌರ್‌ ಪಡೆ ನಿಗದಿತ ಓವರ್‌ಗಳಲ್ಲಿ 127 ರನ್‌ ಗಳಿಗೆ ಸರ್ವಪತನ ಕಂಡಿತು. 128 ರನ್‌ಗಳ ಅಲ್ಪ ಮೊತ್ತದ ಗುರಿ ಬೆನ್ನತ್ತಿದ ಯುಪಿ ವಾರಿಯರ್ಸ್‌ 19.3 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 129 ರನ್‌ ಗಳಿಸಿ ಜಯ ಸಾಧಿಸಿತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!