Wednesday, February 8, 2023

Latest Posts

ಆರ್‌ಆರ್‌ಆರ್ ಸಕ್ಸೆಸ್‌ ಕುರಿತು ಭಾವುಕ ಟ್ವೀಟ್ ಮಾಡಿದ ಉಪಾಸನಾ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ನಿರ್ದೇಶಕ ರಾಜಮೌಳಿ ಅವರ ‘ಆರ್‌ಆರ್‌ಆರ್’ ಚಿತ್ರಕ್ಕೆ ಪ್ರತಿಷ್ಠಿತ ಅಂತರರಾಷ್ಟ್ರೀಯ ಗೋಲ್ಡನ್ ಗ್ಲೋಬ್ ಪ್ರಶಸ್ತಿ ದೊರೆತಿದೆ. ಎಂಎಂ ಕೀರವಾಣಿ ಸಂಗೀತ ನಿರ್ದೇಶನದಲ್ಲಿ ಮೂಡಿಬಂದ ನಾಟು ನಾಟು ಹಾಡಿಗೆ ಅತ್ಯುತ್ತಮ ಹಾಡಿಗೆ ಈ ಪ್ರಶಸ್ತಿ ಲಭಿಸಿದೆ.

ಎನ್‌ಟಿಆರ್ ಮತ್ತು ರಾಮ್ ಚರಣ್ ತಮ್ಮ ಕುಟುಂಬ ಸದಸ್ಯರೊಂದಿಗೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿದ್ದರು. ಈ ವೇಳೆ ಚರಣ್ ಪತ್ನಿ ಉಪಾಸನಾ ಪ್ರಶಸ್ತಿ ಗೆದ್ದ ಖುಷಿಯನ್ನು ಹಂಚಿಕೊಂಡು ಭಾವನಾತ್ಮಕ ಟ್ವೀಟ್ ಮಾಡಿದ್ದಾರೆ. “ನಾನು RRR ಕುಟುಂಬದ ಭಾಗವಾಗಿದ್ದಕ್ಕೆ ತುಂಬಾ ಸಂತೋಷವಾಗಿದೆ. ನನ್ನ ಮಗು ನನ್ನೊಂದಿಗೆ RRR ಯಶಸ್ಸನ್ನು ಅನುಭವಿಸುತ್ತಿರುವುದು ನನಗೆ ತುಂಬಾ ಖುಷಿಯಾಗಿದೆ. ಭಾರತೀಯ ಚಿತ್ರರಂಗಕ್ಕೆ ಅಂತರಾಷ್ಟ್ರೀಯ ಮಟ್ಟದ ಪ್ರಶಸ್ತಿ ಗೆದ್ದಿರುವುದಕ್ಕೆ ನನಗೆ ತುಂಬಾ ಹೆಮ್ಮೆ” ಎಂದು ಭಾವುಕರಾಗಿ ಪೋಸ್ಟ್ ಮಾಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!