UPDATE NEWS | ಬೋರ್‌ವೆಲ್‌ ಗೆ ಬಿದ್ದಿದ್ದ 10 ವರ್ಷದ ಬಾಲಕನ ರಕ್ಷಣಾ ಕಾರ್ಯ ಯಶಸ್ವಿ, ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ಬೋರ್‌ವೆಲ್‌ಗೆ ಬಿದ್ದ 10 ವರ್ಷದ ಬಾಲಕನನ್ನು ಸುಮಿತ್ ಎಂದು ಗುರುತಿಸಲಾಗಿದ್ದು ಬಾಲಕನನ್ನು ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದೆ.

ಶನಿವಾರ ಸಂಜೆ 6:00 ಗಂಟೆಗೆ ರಕ್ಷಣಾ ಕಾರ್ಯಾಚರಣೆ ಪ್ರಾರಂಭವಾಯಿತು ಮತ್ತು ಇಂದು ಬೆಳಿಗ್ಗೆ ಬಾಲಕನನ್ನು ರಕ್ಷಿಸುವವರೆಗೂ ಮುಂದುವರೆದಿದೆ ಎಂದು ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ಮಾನ್ ಸಿಂಗ್ ಠಾಕೂರ್ ಹೇಳಿದ್ದಾರೆ.

“ನಿನ್ನೆ ಮಧ್ಯಾಹ್ನ 3:30 ರ ಸುಮಾರಿಗೆ ಸುಮಿತ್ ಬೋರ್‌ವೆಲ್‌ಗೆ ಬಿದ್ದಿದ್ದಾರೆ. ಹೊರತೆಗೆಯುವ ರಕ್ಷಣಾ ಕಾರ್ಯಾಚರಣೆ ಸಂಜೆ 6 ಗಂಟೆ ಸುಮಾರಿಗೆ ಪ್ರಾರಂಭವಾಯಿತು. ಇಂದು ಬೆಳಿಗ್ಗೆ 9:30 ರ ಸುಮಾರಿಗೆ ಸುಮಿತ್ ಅವರನ್ನು ಬೋರ್‌ವೆಲ್‌ನಿಂದ ಹೊರತೆಗೆಯಲಾಯಿತು. ಬಾಲಕನಿಗೆ ಉಸಿರಾಟದ ಸಮಸ್ಯೆ ಇರುವುದರಿಂದ ತಕ್ಷಣ ಆಸ್ಪತ್ರಗೆ ಕರೆದೊಯ್ಯಲಾಗಿದೆ” ಎಂದು ಠಾಕೂರ್ ತಿಳಿಸಿದ್ದಾರೆ.

 

 

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!