Saturday, July 2, 2022

Latest Posts

ಮೇಲ್ಮನೆ ಚುನಾವಣೆ ಫಲಿತಾಂಶ ಸಮಾಧಾನ ತಂದಿದೆ: ಡಿ.ಕೆ.ಶಿ.

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು: ರಾಜ್ಯದಲ್ಲಿ ನಡೆದ ವಿಧಾನ ಪರಿಷತ್ ಚುನಾವಣಾ ಫಲಿತಾಂಶ ಸಮಾಧಾನ ತಂದಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಇಂದು ಪ್ರಕಟವಾಗಿರುವ ಫಲಿತಾಂಶದ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಅವರು, ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರು ಒಗ್ಗಟ್ಟಾಗಿ ದುಡಿದಿದ್ದಾರೆ. ಹಲವು ಕಡೆ ಕೊನೆ ಕ್ಷಣಕ್ಕೆ ಅಭ್ಯರ್ಥಿ ಹಾಕಿ ಅಲ್ಪ ಮತದಿಂದ ಸೋತಿದ್ದೇವೆ. ಆದರೂ ನಮ್ಮ ಅಭ್ಯರ್ಥಿಗಳು ಪೈಪೋಟಿ ನೀಡಿದ್ದಾರೆ ಎಂದರು.

ಆಡಳಿತಾರೂಢ ಪಕ್ಷಕ್ಕೆ ಒಂದು ಲಾಭ ಇದ್ದೇಯಿದೆ. ಅದನ್ನು ಅವರು ಸಂಪೂರ್ಣ ದುರ್ಬಳಕೆ ಮಾಡಿಕೊಂಡಿದ್ದಾರೆ. ಕಳೆದ ಬಾರಿ ಸೋತ ಕಡೆ ಈ ಬಾರಿ ನಾವು ಗೆಲುವು ಸಾಧಿಸಿದ್ದೇವೆ. ಕೆಲವು ಕಡೆ ಸ್ಥಾನ ಕಳೆದುಕೊಂಡಿದ್ದೇವೆ ಎಂದು ತಿಳಿಸಿದರು.

ಮೇಲ್ಮನೆಯಲ್ಲಿ ಬಹುಮತಕ್ಕಾಗಿ ನಾವು ಹೋರಾಟ ಮಾಡಿಲ್ಲ. ನಾವು ಅದೆನ್ನಲ್ಲ ಲೆಕ್ಕ ಹಾಕಿಲ್ಲ. ಒಟ್ಟಾರೆ ಫಲಿತಾಂಶ ಸಮಾಧಾನ ತಂದಿದೆ ಎಂದು ಡಿ.ಕೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss