ಲಾಲು ಪ್ರಸಾದ್ ಯಾದವ್‌ ಕುಟುಂಬದಲ್ಲಿ ಕೋಲಾಹಲ: ಹಿರಿಯ ಮಗನಿಗೆ ಪಕ್ಷ, ಕುಟುಂಬದಿಂದ ಗೇಟ್‌ಪಾಸ್‌

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್‌ ತಮ್ಮ ಹಿರಿಯ ಪುತ್ರ ತೇಜ್ ಪ್ರತಾಪ್ ಯಾದವ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ್ದಾರೆ.

ತಮ್ಮ ಮಗನನ್ನು ಪಕ್ಷದಿಂದ 6 ವರ್ಷಗಳ ಕಾಲ ಹೊರಹಾಕಿದ್ದಾರೆ. ಇಷ್ಟೇ ಅಲ್ಲ, ಲಾಲು ತೇಜ್ ಪ್ರತಾಪ್ ಅವರನ್ನು ಕುಟುಂಬದಿಂದ ಹೊರಹಾಕಿದ್ದಾರೆ.

ಆರ್‌ಜೆಡಿ ಮುಖ್ಯಸ್ಥರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದು, ತೇಜ್ ಪ್ರತಾಪ್ ಈಗ ಕುಟುಂಬ ಮತ್ತು ಪಕ್ಷದಲ್ಲಿ ಯಾವುದೇ ಪಾತ್ರ ಹೊಂದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ಇತ್ತೀಚೆಗೆ ಲಾಲು ಹಿರಿಯ ಮಗ ತೇಜ್ ಪ್ರತಾಪ್ ಯಾದವ್ ಅವರ ಫೇಸ್‌ಬುಕ್‌ನಲ್ಲಿ ಪಾರ್ಟನರ್‌ ಅನ್ನೋ ಶೀರ್ಷಿಕೆಯಲ್ಲಿ ಕೆಲವೊಂದು ಫೋಟೋಗಳನ್ನು ಹಂಚಿಕೊಳ್ಳಲಾಗಿತ್ತು. ತೇಜ್‌ ಪ್ರತಾಪ್ ಯಾದವ್ ಅವರು ಮದುವೆಯಾಗಿದ್ರು ಬೇರೆ ಯುವತಿ ಜೊತೆ ಫೋಟೋಗೆ ಪೋಸ್‌ ಕೊಟ್ಟಿದ್ದು ಸಾಕಷ್ಟು ವೈರಲ್ ಆಗಿತ್ತು.ತಮ್ಮ ಹಿರಿಯ ಮಗನ ಈ ಅಸಭ್ಯ ವರ್ತನೆ ಲಾಲು ಪ್ರಸಾದ್ ಯಾದವ್ ಹಾಗೂ ಆರ್‌ಜೆಡಿ ಪಕ್ಷದ ನಾಯಕರಿಗೆ ಮುಜುಗರವನ್ನು ಉಂಟು ಮಾಡಿತ್ತು. ಈ ಹಿನ್ನೆಲೆಯಲ್ಲಿ ಲಾಲು ಪ್ರಸಾದ್ ಯಾದವ್‌ ಅವರು ಚುನಾವಣೆಯ ದೃಷ್ಟಿಕೋನದಲ್ಲಿ ಮಗನನ್ನೇ ಪಕ್ಷದಿಂದ ಉಚ್ಛಾಟಿಸಿ, ಮಗನಿಗಿಂತ ಪಕ್ಷದಲ್ಲಿ ಶಿಸ್ತು ಮುಖ್ಯ ಅನ್ನೋ ಸಂದೇಶ ಸಾರಿದ್ದಾರೆ.

ಈ ಕುರಿತು ಪೋಸ್ಟ್ ಮಾಡಿರುವ ಲಾಲು ಪ್ರಸಾದ್, ‘ವೈಯಕ್ತಿಕ ಜೀವನದಲ್ಲಿ ನೈತಿಕ ಮೌಲ್ಯಗಳನ್ನು ನಿರ್ಲಕ್ಷಿಸುವುದರಿಂದ ಸಾಮಾಜಿಕ ನ್ಯಾಯಕ್ಕಾಗಿ ನಮ್ಮ ಸಾಮೂಹಿಕ ಹೋರಾಟವನ್ನು ದುರ್ಬಲಗೊಳಿಸುತ್ತದೆ’ . ಹಿರಿಯ ಮಗನ ಚಟುವಟಿಕೆಗಳು, ಸಾರ್ವಜನಿಕ ನಡವಳಿಕೆ ಮತ್ತು ಬೇಜವಾಬ್ದಾರಿ ವರ್ತನೆ ನಮ್ಮ ಕೌಟುಂಬಿಕ ಮೌಲ್ಯಗಳು ಮತ್ತು ಸಂಪ್ರದಾಯಗಳಿಗೆ ಅನುಗುಣವಾಗಿಲ್ಲ. ಆದ್ದರಿಂದ, ಮೇಲಿನ ಸಂದರ್ಭಗಳಿಂದಾಗಿ, ನಾನು ಅವರನ್ನು ಪಕ್ಷ ಮತ್ತು ಕುಟುಂಬದಿಂದ ದೂರವಿಡುತ್ತೇನೆ. ಇನ್ನು ಮುಂದೆ ಅವರಿಗೆ ಪಕ್ಷ ಮತ್ತು ಕುಟುಂಬದಲ್ಲಿ ಯಾವುದೇ ರೀತಿಯ ಪಾತ್ರವಿರುವುದಿಲ್ಲ. ಅವರನ್ನು ಪಕ್ಷದಿಂದ 6 ವರ್ಷಗಳ ಕಾಲ ಹೊರಹಾಕಲಾಗುತ್ತದೆ. ಇದಲ್ಲದೆ ಲಾಲು ಯಾದವ್ ಅವರು ತಮ್ಮ ವೈಯಕ್ತಿಕ ಜೀವನದ ಒಳ್ಳೆಯದು ಮತ್ತು ಕೆಟ್ಟದ್ದನ್ನು ಮತ್ತು ಒಳಿತು ಮತ್ತು ಕೆಡುಕುಗಳನ್ನು ನೋಡುವ ಸಾಮರ್ಥ್ಯ ಹೊಂದಿದ್ದಾರೆ . ಅವರೊಂದಿಗೆ ಸಂಬಂಧ ಹೊಂದಿರುವವರು ತಮ್ಮ ಸ್ವಂತ ವಿವೇಚನೆಯಿಂದ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು ಎಂದು ಬರೆದಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!