ಹೊಸದಿಗಂತ ಡಿಜಿಟಲ್ ಡೆಸ್ಕ್:
ಭೂಮಿ ವಿಚಾರಕ್ಕೆ ಗಲಾಟೆ ನಡೆದು ಕಾರ್ಣಿಕ ದೈವ ಕೊರಗಜ್ಜನ ಗುಡಿಗೆ ವ್ಯಕ್ತಿಯೊಬ್ಬ ಬೆಂಕಿ ಹಚ್ಚಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಗ್ರಾಮದ ಬಾಡಾರು ಎಂಬಲ್ಲಿ ನಡೆದಿದೆ.
ಬಾಡಾರಿನ ಕೊರಗಕಲ್ಲು ಬಳಿ ಕೊರಗಜ್ಜನ ಕಟ್ಟೆ ಇದೆ. ಸಾರ್ವಜನಿಕರು ಸಮಿತಿ ರಚಿಸಿ ವರ್ಷಂಪ್ರತಿ ಕೊರಗಜ್ಜನ ಆರಾಧನೆ ಮಾಡುತ್ತಿದ್ದರು.
ಆದರೆ ಕೊರಗಜ್ಜನ ಗುಡಿ ಇರುವ ಜಾಗದ ಬಗ್ಗೆ ಸ್ಥಳೀಯ ವ್ಯಕ್ತಿ ಆಕ್ಷೇಪ ವ್ಯಕ್ತಪಡಿಸಿದ್ದರು. ಗುಡಿ ಇರುವ ಜಾಗ ಖಾಸಗಿ ಕುಟುಂಬಸ್ಥರದ್ದು, ಸಾರ್ವಜನಿಕ ಹಸ್ತಕ್ಷೇಪ ಮಾಡಬಾರದೆಂದು ತಗಾದೆ ಎತ್ತಿದ್ದರು. ಈ ತಗಾದೆ ಕೆಲವು ವರ್ಷಗಳಿಂದ ಏರ್ಪಟ್ಟಿತ್ತು. ಆದರೀಗ ಆ ವ್ಯಕ್ತಿ ಗುಡಿಗೇ ಬೆಂಕಿ ಹಚ್ಚಿದ್ದು, ಇದನ್ನು ಖಂಡಿಸಿದ ಸ್ವಾಮಿ ಕೊರಗಜ್ಜ ಸಮಿತಿಯು ವೇಣೂರು ಪೊಲೀಸ್ ಠಾಣೆಗೆ ದೂರು ನೀಡಿದೆ..