ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿ ತಾಲ್ಲೂಕಿನ ಢವಳೇಶ್ವರ ಗ್ರಾಮದ ಮೊರಬದ ತೋಟದ ವಸತಿ ಶಾಲೆಯಲ್ಲಿ ಇಬ್ಬರು ವಿದ್ಯಾರ್ಥಿಗಳ ಗಲಾಟೆಯಲ್ಲಿ ಓರ್ವ ವಿದ್ಯಾರ್ಥಿ ಕಣ್ಣುಗುಡ್ಡೆಯನ್ನೇ ಕಳೆದುಕೊಂಡಿರುವ ಘಟನೆ ನಡೆದಿದೆ.
ಢವಳೇಶ್ವರ ಗ್ರಾಮದ ಮೊರಬದ ತೋಟದ ವಸತಿ ಶಾಲೆಯಲ್ಲಿ 1ನೇ ಕ್ಲಾಸ್ ಓದುತ್ತಿರುವ ಭೀಮಪ್ಪ ಹಾಗೂ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಸಮರ್ಥ ನಡುವೆ ಪೆನ್ನಿನ ವಿಚಾರಕ್ಕೆ ಗಲಾಟೆಯಾಗಿದ್ದು, ಈ ವೇಳೆ ಭೀಮಪ್ಪ ಕಟ್ಟಿಗೆಯಿಂದ ಸಮರ್ಥನ ಬಲಗಣ್ಣಿಗೆ ಇರಿದಿದ್ದಾನೆ. ಇದರಿಂದ ತೀವ್ರಗೊಂಡಿರುವ ಸಮರ್ಥನನ್ನು ಆಸ್ಪತ್ರೆಗೆ ದಾಖಲಿಸಿದ್ದು, ಇದೀಗ ವೈದ್ಯರು ಕಣ್ಣುಗುಡ್ಡೆಯನ್ನೇ ತೆಗೆದಿದ್ದಾರೆ.
ಒಂದನೇ ತರಗತಿ ವಿದ್ಯಾರ್ಥಿ ಭಿಮಪ್ಪ ಲೋಕುರೆಗೆ ಐದನೇ ತರಗತಿ ವಿದ್ಯಾರ್ಥಿ ಸಮರ್ಥ್ ಪೆನ್ ನೀಡಿದ್ದ. ಅದನ್ನು ವಾಪ್ ಕೇಳಿದ್ದಕ್ಕೆ ಇಬ್ಬರ ನಡುವೆ ಮಾತಿನ ಚಕಮಕಿಯಾಗಿದ್ದು, ಈ ವೇಳೆ ವಿದ್ಯಾರ್ಥಿ ಭಿಮಪ್ಪ, ಕಟ್ಟಿಗೆಯಿಂದ ಸಮರ್ಥ್ ನ ಕಣ್ಣಿಗೆ ತಿವಿದಿದ್ದಾನೆ. ಇದರಿಂದ ಗಾಯಗೊಂಡ ಸಮರ್ಥ್ ನನ್ನು ಕೂಡಲೇ ಬೆಳಗಾವಿ ಜಿಲ್ಲೆ ಅಥಣಿ ನಗರದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಬಲಗಣ್ಣಿಗೆ ಗಂಭೀರವಾಗಿ ಗಾಯವಾಗಿದ್ದರಿಂದ ಕಣ್ಣು ಗುಡ್ಡೆಯನ್ನೇ ತಗೆಯಬೇಕಾಗಿದೆ. ಇನ್ನು ಕಣ್ಣು ಗುಡ್ಡೆ ಕಳೆದುಕೊಂಡ ಮಗನ ಸ್ಥಿತಿ ಕಂಡು ಪೋಷಕರು ಕಂಗಾಲಾಗಿದ್ದಾರೆ.
ಕಣ್ಣು ಕಳೆದುಕೊಂಡ ವಿದ್ಯಾರ್ಥಿಗೆ ಸರ್ಕಾರ ಪರಿಹಾರ ನೀಡಬೇಕೆಂದು ಮನವಿ ಮಾಡಲಾಗಿದೆ. ಸದ್ಯ ಮುಖ್ಯ ಶಿಕ್ಷಕಿ ಜಯಶ್ರೀ ಹಾಗೂ ಅತಿಥಿ ಶಿಕ್ಷಕಿ ಶಿಲ್ಪಾ ಎಂಬುವವರ ವಿರುದ್ಧ ಮಹಾಲಿಂಗಪುರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.