January21, 2026
Wednesday, January 21, 2026
spot_img

ಯುಪಿಎಸ್ ಸರಕು ವಿಮಾನ ಪತನ: ಸಾವಿನ ಸಂಖ್ಯೆ 7ಕ್ಕೆ ಏರಿಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕೆಂಟುಕಿಯಲ್ಲಿ ಯುಪಿಎಸ್ ಸರಕು ವಿಮಾನವು ಅಪಘಾತಕ್ಕೀಡಾಗಿ ಸಾವನ್ನಪ್ಪಿರುವವರ ಸಂಖ್ಯೆ 7ಕ್ಕೆ ಏರಿಕೆ ಆಗಿದೆ.

ಲೂಯಿಸ್‌ವಿಲ್ಲೆಯ ಮುಹಮ್ಮದ್ ಅಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕಾಫ್ ಆಗುವಾಗ ಫೆಡರಲ್ ಏವಿಯೇಷನ್ ​​ಅಡ್ಮಿನಿಸ್ಟ್ರೇಷನ್ ನ ಯುಪಿಎಸ್ ಸರಕು ವಿಮಾನಕ್ಕೆ ಬೆಂಕಿ ಹೊತ್ತಿಕೊಂಡಿದ್ದು,ಪತನಗೊಂಡಿದೆ. ಘಟನೆಯಲ್ಲಿ ಏಳು ಮಂದಿ ಸಾವನ್ನಪ್ಪಿದ್ದು, 11 ಮಂದಿ ಗಾಯಗೊಂಡಿದ್ದಾರೆ.

ಫೆಡರಲ್ ಏವಿಯೇಷನ್ ​​ಅಡ್ಮಿನಿಸ್ಟ್ರೇಷನ್ ವಿಮಾನ ಅಪಘಾತಕ್ಕೀಡಾದ ಬಳಿಕ ಲೂಯಿಸ್‌ವಿಲ್ಲೆಯ ಮುಹಮ್ಮದ್ ಅಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಡುವ ಎಲ್ಲಾ ವಿಮಾನಗಳನ್ನು ರದ್ದುಗೊಳಿಸಲಾಗಿದೆ ಎಂದು ಫೆಡರಲ್ ಏವಿಯೇಷನ್ ​​ಅಡ್ಮಿನಿಸ್ಟ್ರೇಷನ್ ಅಧಿಕಾರಿಗಳು ತಿಳಿಸಿದ್ದಾರೆ.

ಟೇಕಾಫ್ ಆದ ಬಳಿಕ ವಿಮಾನದ ಎಡ ರೆಕ್ಕೆಯಲ್ಲಿ ಬೆಂಕಿಯ ಜ್ವಾಲೆಗಳು ಕಾಣಿಸಿಕೊಂಡಿದ್ದು, ಹೊಗೆಯು ಆವರಿಸಿದೆ. ವಿಮಾನ ಸ್ವಲ್ಪ ಎತ್ತರಕ್ಕೆ ಹರಿದಾಗ ಅಪಘಾತಕ್ಕೀಡಾಗಿ ಬೃಹತ್ ಬೆಂಕಿಯ ಉಂಡೆಯಾಗಿ ಕಾಣಿಸಿತ್ತು. ವಿಮಾನ ಅಪಘಾತದಿಂದ ಹಲವಾರು ಕಟ್ಟಡಗಳು ಬೆಂಕಿಯಲ್ಲಿ ಸುಟ್ಟುಹೋದವು. ಯುಪಿಎಸ್ ವಿಮಾನದಲ್ಲಿದ್ದ ಮೂವರು ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಫೆಡರಲ್ ಅಧಿಕಾರಿಗಳು ತಿಳಿಸಿದ್ದಾರೆ.

ದುರಂತ ನಡೆದ ಪ್ರದೇಶದಲ್ಲಿ ಅನೇಕ ರಸ್ತೆಗಳನ್ನು ಮುಚ್ಚಲಾಗಿತ್ತು. ಘಟನಾ ಸ್ಥಳದಿಂದ ದೂರವಿರುವಂತೆ ಲೂಯಿಸ್‌ವಿಲ್ಲೆ ಮೇಯರ್ ಕ್ರೇಗ್ ಗ್ರೀನ್‌ಬರ್ಗ್ ಅವರು ಸಂಜೆ ಸಾಮಾಜಿಕ ಮಾಧ್ಯಮದ ಮೂಲಕ ಎಲ್ಲರಿಗೂ ಎಚ್ಚರಿಕೆಯನ್ನು ನೀಡಿದ್ದಾರೆ. ಘಟನೆಯಲ್ಲಿ ಸಾವನ್ನಪ್ಪಿದವರಿಗೆ ಸಂತಾಪ ಸೂಚಿಸಿರುವ ಕೆಂಟುಕಿ ಗವರ್ನರ್ ಆಂಡಿ ಬೆಶಿಯರ್, ಗಾಯಾಳುಗಳ ಚೇತರಿಕೆಗಾಗಿ ಪ್ರಾರ್ಥಿಸುವುದಾಗಿ ಹೇಳಿದ್ದಾರೆ

Must Read