ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಲೋಕಸೇವಾ ಆಯೋಗ (UPSC) 2023ರ ನಾಗರಿಕ ಸೇವೆ ಹುದ್ದೆಗಳ ಪ್ರಿಲಿಮಿನರಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ. ಅಭ್ಯರ್ಥಿಗಳು ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ವೀಕ್ಷಿಸಬಹುದು.
ಯುಪಿಎಸ್ಸಿ ಸಿವಿಲ್ ಸರ್ವಿಸಸ್ ಪ್ರಿಲಿಮಿನರಿ ಪರೀಕ್ಷೆಯನ್ನು ಮೇ 28ರಂದು ಯಶಸ್ವಿಯಾಗಿ ನಡೆಸಿತ್ತು. ಸದ್ಯ ಆಯೋಗವು ಈ ಪರೀಕ್ಷೆಯ ಫಲಿತಾಂಶವನ್ನು ತನ್ನ ವೆಬ್ಸೈಟ್ನಲ್ಲಿ ಇಂದು ಪ್ರಕಟ ಮಾಡಿದೆ.
ಯುಪಿಎಸ್ಸಿ ಪ್ರಿಲಿಮ್ಸ್ ಪರೀಕ್ಷೆಯ ಫಲಿತಾಂಶ ವೀಕ್ಷಿಸುವುದು ಹೇಗೆ ?:
ಅಭ್ಯರ್ಥಿಗಳು ಯುಪಿಎಸ್ಸಿಯ ಅಧಿಕೃತ ವೆಬ್ಸೈಟ್ https://www.upsc.gov.in/ ಗೆ ಭೇಟಿ ನೀಡಿ. ಮುಖಪುಟದಲ್ಲಿ ಫಲಿತಾಂಶಗಳು ಅಥವಾ ಪರೀಕ್ಷೆ ಟ್ಯಾಬ್ ಮೇಲೆ ಕ್ಲಿಕ್ ಮಾಡಿ. ಯುಪಿಎಸ್ಸಿ ವಿವಿಧ ಪರೀಕ್ಷೆಗಳನ್ನು ನಡೆಸುತ್ತದೆ ಹಾಗಾಗಿ ನೀವು ಬರೆದ ಪರೀಕ್ಷೆಯ ಫಲಿತಾಂಶದ ಲಿಂಕ್ ಮೇಲೆ ಕ್ಲಿಕ್ ಮಾಡಿ ಫಲಿತಾಂಶವನ್ನು ವೀಕ್ಷಿಸಿ.
ಒಟ್ಟು 14,624 ಅಭ್ಯರ್ಥಿಗಳು CSE ಮೇನ್ಸ್ ಪರೀಕ್ಷೆಗೆ ತಾತ್ಕಾಲಿಕವಾಗಿ ಅರ್ಹತೆ ಪಡೆದಿದ್ದಾರೆ ಮತ್ತು 1,958 ಅಭ್ಯರ್ಥಿಗಳ ಹೆಸರನ್ನು IFoS ಮುಖ್ಯ ಪರೀಕ್ಷೆಯ ಮೆರಿಟ್ ಪಟ್ಟಿಯಲ್ಲಿ ಪ್ರಕಟಿಸಲಾಗಿದೆ.
ಪರೀಕ್ಷೆಯ ಸಂಪೂರ್ಣ ಪ್ರಕ್ರಿಯೆ ಮುಗಿದ ನಂತರ ಪ್ರಿಲಿಮ್ಸ್ ಪರೀಕ್ಷೆಯ ಅಂಕಗಳು, ಕಟ್-ಆಫ್ ಅಂಕಗಳು ಮತ್ತು ಕೀ ಉತ್ತರಗಳನ್ನು upsc.gov.in ನಲ್ಲಿ ಅಪ್‌ಲೋಡ್ ಮಾಡಲಾಗುತ್ತದೆ.