ಮೇ 28 ರಂದು ಯುಪಿಎಸ್​ಸಿ ಪೂರ್ವಭಾವಿ ಪರೀಕ್ಷೆ: ಬೆಳಗ್ಗೆ 6 ಗಂಟೆಯಿಂದಲೇ ಮೆಟ್ರೋ ರೈಲು ಸಂಚಾರ ಶುರು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮೇ 28ರ ಭಾನುವಾರ ಯುಪಿಎಸ್​ಸಿ ಪೂರ್ವಭಾವಿ ಪರೀಕ್ಷೆ (UPSC Preliminary Exam) ಇರುವ ಹಿನ್ನೆಲೆ ಬೆಳಗ್ಗೆ 6 ಗಂಟೆಯಿಂದಲೇ ಮೆಟ್ರೋ ರೈಲು ಸಂಚಾರ ಆರಂಭವಾಗಲಿದೆ ಎಂದು ಬೆಂಗಳೂರು ಮೆಟ್ರೊ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (BMRCL) ತಿಳಿಸಿದೆ.

ಆ ದಿನ ಎಲ್ಲಾ ಟರ್ಮಿನಲ್ ನಿಲ್ದಾಣಗಳಾದ ಬೈಯಪ್ಪನಹಳ್ಳಿ, ಕೆಂಗೇರಿ, ನಾಗಸಂದ್ರ, ರೇಷ್ಮೆ ಸಂಸ್ಥೆ ಕೃಷ್ಣರಾಜಪುರ ಮತ್ತು ವೈಟ್‌ಫೀಲ್ಡ್​​ಗಳಿಂದ (ಕಾಡುಗೋಡಿ) ಮೆಟ್ರೋ ರೈಲು ಸೇವೆಗಳು 6 ಗಂಟೆಗೆ ಪ್ರಾರಂಭವಾಗಲಿದೆ ಎಂದು ಬಿಎಂಆರ್​ಸಿಎಲ್ ಪ್ರಕಟಣೆ ತಿಳಿಸಿದೆ.

ಪ್ರಯಾಣಿಕರು ಈ ಸೇವೆಯನ್ನು ಪೂರ್ಣ ಪ್ರಮಾಣದಲ್ಲಿ ಉಪಯೋಗಿಸಿಕೊಳ್ಳಬೇಕೆಂದು ಬಿಎಂಆರ್​ಸಿಎಲ್ ಮಾಧ್ಯಮ ಪ್ರಕಟಣೆಯಲ್ಲಿ ವಿನಂತಿಸಲಾಗಿದೆ.
ಪ್ರತಿ ಭಾನುವಾರ ಬೆಂಗಳೂರಿನಲ್ಲಿ ಮೆಟ್ರೋ ರೈಲು ಸಂಚಾರ ಬೆಳಗ್ಗೆ 7 ಗಂಟೆಗೆ ಆರಂಭವಾಗುತ್ತದೆ. ಉಳಿದಂತೆ ವಾರದ ದಿನಗಳಲ್ಲಿ ಸೋಮವಾರದಿಂದ ಶನಿವಾರದ ವರೆಗೆ ಬೆಳಗ್ಗೆ 5 ಗಂಟೆಗೇ ಮೆಟ್ರೋ ರೈಲು ಸಂಚಾರ ಆರಂಭವಾಗುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!