ಹೊಸದಿಗಂತ ಡಿಜಿಟಲ್ ಡೆಸ್ಕ್ :
ಕೇಂದ್ರೀಯ ಲೋಕಸೇವಾ ಆಯೋಗವು 111 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಪದವಿ, ಸ್ನಾತಕೋತ್ತರ ಪದವಿ, ಬಿ.ಇ/ಬಿ.ಟೆಕ್, ಎಂ.ಫಿಲ್, ಪಿಹೆಚ್.ಡಿ, ಎಂ.ಎಸ್ಸಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ಅರ್ಜಿದಾರರು 25/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ/ಮಹಿಳಾ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜನವರಿ 14,2023 ರಿಂದ ಫೆಬ್ರವರಿ 2,2023ರೊಳಗೆ ಅರ್ಜಿಯನ್ನು ಹಾಕಬಹುದು.