RECRUITMENT | ಕೇಂದ್ರ ಲೋಕಸೇವಾ ಆಯೋಗದಲ್ಲಿ 146 ಹುದ್ದೆಗಳ ನೇಮಕಾತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಕೇಂದ್ರ ಲೋಕಸೇವಾ ಆಯೋಗದಲ್ಲಿ 146 ಸಂಶೋಧನಾ ಅಧಿಕಾರಿ, ಸಹಾಯಕ ನಿರ್ದೇಶಕ, ಪಬ್ಲಿಕ್‌ ಪ್ರಾಸಿಕ್ಯುಟರ್‌, ಜ್ಯೂನಿಯರ್‌ ಇಂಜಿನಿಯರ್‌ ಮತ್ತು ಸಹಾಯಕ ಆರ್ಕಿಟೆಕ್ಟ್‌ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಪದವಿ, ಸ್ನಾತಕೋತ್ತ ಪದವಿ, ಎಲ್‌ಎಲ್‌ಬಿ, ಸಿಎ, ಎಂಕಾಂ, ಡಿಪ್ಲೋಮಾ, ಬಿ.ಇ/ಬಿ.ಟೆಕ್‌ ವಿದ್ಯಾರ್ಹತೆ ಜೊತೆಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿದಾರರು 25/ರೂ ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ/ಮಹಿಳಾ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಏಪ್ರಿಲ್‌ 27,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!