ಹೊಸದಿಗಂತ ಡಿಜಿಟಲ್ ಡೆಸ್ಕ್ :
ಕೇಂದ್ರ ಲೋಕಸೇವಾ ಆಯೋಗವು 43 ಸಹಾಯಕ ನಿರ್ದೇಶಕ, ಡೆಪ್ಯುಟಿ ಡೈರೆಕ್ಟರ್ ಮತ್ತು ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಪದವಿ, ಡಿಎ, ಎಂಬಿಎ, ಎಂಬಿಬಿಎಸ್, ಎಂ.ಡಿ, ಎಂ.ಎಸ್, ಬಿ.ಇ/ಬಿ.ಟೆಕ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.
ಅರ್ಜಿದಾರರು 25ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
ಅರ್ಜಿದಾರರು ಆನ್‌ಲೈನ್ ಮೂಲಕ ಮಾರ್ಚ್ 16,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.