RECRUITMENT | ಕೇಂದ್ರ ಲೋಕಸೇವಾ ಆಯೋಗದಲ್ಲಿ 45 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್ :‌

ಕೇಂದ್ರ ಲೋಕಸೇವಾ ಆಯೋಗದಲ್ಲಿ 45 ಜಂಟಿ ನಿರ್ದೇಶಕರು, ತಜ್ಞರು, ಅಧಿಕಾರಿಗಳು ಮತ್ತು
ಡೆಪ್ಯುಟಿ ನಿರ್ದೇಶಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಪದವಿ, ಸ್ನಾತಕೋತ್ತರ ಪದವಿ, ಬಿ.ಇ/ಬಿ.ಟೆಕ್‌, ಎಂಬಿಬಿಎಸ್‌, ಎಂ.ಎಸ್‌ ವಿದ್ಯಾರ್ಹತೆ ಜೊತೆಗೆ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿದಾರರು 25/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ/ಮಹಿಳಾ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನನು ಪಾವತಿಸುವಂತಿಲ್ಲ.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಮಾರ್ಚ್‌ 30,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!