Friday, September 22, 2023

Latest Posts

JOB| ಕೇಂದ್ರ ಲೋಕಸೇವಾ ಆಯೋಗದಲ್ಲಿ 56 ಹುದ್ದೆಗಳ ನೇಮಕಾತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಕೇಂದ್ರ ಲೋಕಸೇವಾ ಆಯೋಗದಲ್ಲಿ 56 ಏರೋನಾಟಿಕಲ್ ಆಫೀಸರ್, ಸೀನಿಯರ್ ಅಡ್ಮಿನಿಸ್ಟ್ರೇಟಿವ್ ಆಫೀಸರ್ ಮತ್ತು ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಏರೋನಾಟಿಕಲ್/ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ಸ್/ಮೆಕ್ಯಾನಿಕಲ್/ಮೆಟಲರ್ಜಿಕಲ್ ಎಂಜಿನಿಯರಿಂಗ್‌ನಲ್ಲಿ ಪದವಿ, ಸಿವಿಲ್ ಇಂಜಿನಿಯರಿಂಗ್/CS/IT ನಲ್ಲಿ ಪದವಿ, ಗಣಿತ/ಭೂಗೋಳ/ಭೂಭೌತಶಾಸ್ತ್ರ/ಕಂಪ್ಯೂಟರ್ ಅಪ್ಲಿಕೇಶನ್ಸ್/CS/IT ನಲ್ಲಿ ಸ್ನಾತಕೋತ್ತರ ಪದವಿ ಮತ್ತು ಎಲೆಕ್ಟ್ರಾನಿಕ್ಸ್/ಕಮ್ಯುನಿಕೇಷನ್‌ನಲ್ಲಿ AMIE, ಭೌತಶಾಸ್ತ್ರ/ಭೂಭೌತಶಾಸ್ತ್ರ/ಭೂವಿಜ್ಞಾನ/ಗಣಿತದಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಹುದ್ದೆಗಳಿಗನುಸಾರ ಗರಿಷ್ಟ 35 ರಿಂದ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಆಗಸ್ಟ್‌ 10,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!