July 10, 2026
Friday, July 10, 2026
spot_img

UPSC ಫಲಿತಾಂಶ ಪ್ರಕಟ: ಅನುಜ್ ಅಗ್ನಿಹೋತ್ರಿಗೆ ಆಲ್ ಇಂಡಿಯಾ ಫಸ್ಟ್ ರ‍್ಯಾಂಕ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಲೋಕ ಸೇವಾ ಆಯೋಗ (UPSC) 2025ನೇ ಸಾಲಿನ ನಾಗರಿಕ ಸೇವೆಗಳ ಪರೀಕ್ಷೆಯ ಅಂತಿಮ ಫಲಿತಾಂಶವನ್ನು ಪ್ರಕಟಿಸಿದೆ.

ದೇಶದ ಅತ್ಯಂತ ಪ್ರತಿಷ್ಠಿತ ಪರೀಕ್ಷೆಯಾಗಿ ಪರಿಗಣಿಸಲ್ಪಡುವ ಈ ಪರೀಕ್ಷೆಯಲ್ಲಿ ರಾಜಸ್ಥಾನದ ಅನುಜ್ ಅಗ್ನಿಹೋತ್ರಿ ಆಲ್ ಇಂಡಿಯಾ ಫಸ್ಟ್ ರ‍್ಯಾಂಕ್ ಪಡೆದು ಸಾಧನೆ ಮಾಡಿದ್ದಾರೆ.

2025ರ ಆಗಸ್ಟ್ ತಿಂಗಳಲ್ಲಿ ನಡೆದ ನಾಗರಿಕ ಸೇವೆಗಳ ಮುಖ್ಯ ಪರೀಕ್ಷೆ ಹಾಗೂ ಸಂದರ್ಶನದ ಬಳಿಕ ಅಂತಿಮ ಪಟ್ಟಿಯನ್ನು ಯುಪಿಎಸ್‌ಸಿ ಬಿಡುಗಡೆ ಮಾಡಿದೆ. ಈ ಫಲಿತಾಂಶದ ಆಧಾರದ ಮೇಲೆ ಐಎಎಸ್, ಐಪಿಎಸ್, ಐಎಫ್‌ಎಸ್ ಸೇರಿದಂತೆ ವಿವಿಧ ಕೇಂದ್ರ ಸೇವೆಗಳಿಗಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಈ ಬಾರಿ ಒಟ್ಟು 958 ಅಭ್ಯರ್ಥಿಗಳು ಅಂತಿಮವಾಗಿ ಆಯ್ಕೆಯಾಗಿದ್ದು, ದೇಶದ ವಿವಿಧ ರಾಜ್ಯಗಳಿಂದ ಪ್ರತಿಭಾವಂತರು ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಎರಡನೇ ಸ್ಥಾನವನ್ನು ರಾಜೇಶ್ವರಿ ಸುವೆ ಎಂ ಪಡೆದಿದ್ದು, ಆಕಾಶ್ ಧುಲ್ ಮೂರನೇ ಸ್ಥಾನ ಗಳಿಸಿದ್ದಾರೆ.

ಇದನ್ನೂ ಓದಿ:

ಟಾಪ್ 10 ಪಟ್ಟಿಯಲ್ಲಿ ರಾಘವ್ ಜುಂಜುನ್ವಾಲಾ, ಇಶಾನ್ ಭಟ್ನಾಗರ್, ಜಿನ್ನಿಯಾ ಅರೋರಾ, ಎ.ಆರ್. ರಾಜಾ ಮೊಹೈದೀನ್, ಪಕ್ಷಲ್ ಸೆಕ್ರೆಟ್ರಿ, ಆಸ್ಥಾ ಜೈನ್ ಹಾಗೂ ಉಜ್ವಲ್ ಪ್ರಿಯಾಂಕ್ ಕೂಡ ಸ್ಥಾನ ಪಡೆದಿದ್ದಾರೆ.

ಯುಪಿಎಸ್‌ಸಿ ನಾಗರಿಕ ಸೇವೆಗಳ ಪರೀಕ್ಷೆ ದೇಶದ ಅತ್ಯಂತ ಕಠಿಣ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲೊಂದು ಎಂದು ಪರಿಗಣಿಸಲಾಗುತ್ತದೆ. ಪ್ರಾಥಮಿಕ, ಮುಖ್ಯ ಪರೀಕ್ಷೆ ಹಾಗೂ ಸಂದರ್ಶನ ಸೇರಿದಂತೆ ಹಲವು ಹಂತಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಮಾತ್ರ ಅಂತಿಮ ಪಟ್ಟಿಯಲ್ಲಿ ಸ್ಥಾನ ಪಡೆಯುತ್ತಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !