Tuesday, May 30, 2023

Latest Posts

ಅನಾರೋಗ್ಯದಿಂದ ಉಡುಪಿ ಮಾಜಿ ಶಾಸಕ ಯು.ಆರ್.ಸಭಾಪತಿ ನಿಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಅನಾರೋಗ್ಯದ ಕಾರಣಗಳಿಂದ ಉಡುಪಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಯು.ಆರ್.ಸಭಾಪತಿ ತಮ್ಮ 72ನೇ ವಯಸ್ಸಿಗೆ ನಿಧನರಾಗಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಯು.ಆರ್.ಸಭಾಪತಿ ಚಿಕಿತ್ಸೆ ಫಲಕಾರಿಯಾಗದೇ ತಮ್ಮ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ.

ಸಭಾಪತಿ ನಿಧನಕ್ಕೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. 1980-90ರ ದಶಕದಲ್ಲಿ ಪ್ರಭಾವಿ ನಾಯಕರಾಗಿದ್ದ ಸಭಾಪತಿಯವರು ಉಡುಪಿ ಕ್ಷೇತ್ರದಿಂದ 2 ಬಾರಿ ಶಾಸಕರಾಗಿದ್ದರು.

1994ರಲ್ಲಿ ಎಸ್.ಬಂಗಾರಪ್ಪ ನೇತೃತ್ವದ ಕರ್ನಾಟಕ ಕಾಂಗ್ರೆಸ್ ಪಕ್ಷದಿಂದ ಉಡುಪಿ ಕ್ಷೇತ್ರದಲ್ಲಿ ಸ್ಪರ್ಧಿಸಿ ಶಾಸಕರಾಗಿ ವಿಧಾನಸಭೆ ಪ್ರವೇಶಿಸಿದ್ದರು. 1999ರಲ್ಲಿ ಕಾಂಗ್ರೆಸ್​ನಿಂದ ಸ್ಪರ್ಧಿಸಿ ಎರಡನೇ ಬಾರಿಗೆ ಶಾಸಕರಾಗಿದ್ದರು. 2004ರಲ್ಲಿ ರಘುಪತಿ ಭಟ್ ವಿರುದ್ಧ ಸ್ಪರ್ಧಿಸಿ ಸೋಲುಕಂಡಿದ್ದರು. 1987ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪರಿಷತ್ ನ ಉದ್ಯಾವರ ಕ್ಷೇತ್ರದ ಸದಸ್ಯರಾಗಿದ್ದ ಇವರು, ಪರಿಷತ್ ನ ಶಿಕ್ಷಣ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಅದೇ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಉತ್ತರ ವಿಭಾಗದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!