ನೇಕಾರ ಸಮುದಾಯಗಳ ಅಭಿವೃದ್ಧಿ ನಿಗಮ ಕಾರ್ಯಾರಂಭಕ್ಕೆ ಕ್ರಮ ಜರುಗಿಸಲು ಒತ್ತಾಯ

ಹೊಸದಿಗಂತ ವರದಿ ಬಾಗಲಕೋಟೆ :

ರಾಜ್ಯದಲ್ಲಿ ಹಿಂದುಳಿದ ವರ್ಗಕ್ಕೆ ಸೇರಿದ ನೇಕಾರ ಸಮುದಾಯವು 60 ಲಕ್ಷ ಜನಸಂಖ್ಯೆ ಹೊಂದಿದ್ದು, ಶೈಕ್ಷಣಿಕ, ರಾಜಕೀಯ ಹಾಗೂ ಆರ್ಥಿಕ ಬಲವರ್ಧನೆಗಾಗಿ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ “ನೇಕಾರ ಸಮುದಾಯಗಳ ಅಭಿವೃದ್ಧಿ ನಿಗಮ” ವನ್ನು ಸ್ಥಾಪಿಸಲಾಗಿತ್ತು. ರಾಜ್ಯದಲ್ಲಿ ಈಗಿನ ಸರ್ಕಾರದ ಮುಖ್ಯ ಮಂತ್ರಿ ಸಿದ್ದರಾಮಯ್ಯರವರು ನೇಕಾರ ಸಮುದಾಯಗಳ ಅಭಿವೃದ್ಧಿ ನಿಗಮ ಕಾರ್ಯಾರಂಭ ಕ್ರಮ ಕೈಗೊಳ್ಳಲು ಮುಂದಾಗಬೇಕು ಎಂದು ನೇಕಾರ ಸಮುದಾಯಗಳ ಒಕ್ಕೂಟದ ರಾಜ್ಯ ಅಧ್ಯಕ್ಷ ಬಿ.ಎಸ್.ಸೋಮಶೇಖರ ಒತ್ತಾಯಿಸಿದರು.

ನವನಗರದ ಪತ್ರಿಕಾಭವನದಲ್ಲಿ‌ ಸುದ್ದಿಗಾರರೊಂದಿಗೆ ಮಾತನಾಡಿದ‌ ಅವರು, ಇತ್ತೀಚೆಗೆ ‘ಜಾತಿಗಣತಿ’ ವಿಷಯ ಹೆಚ್ಚು ಪ್ರಾಮುಖ್ಯತೆಯನ್ನು ಪಡೆಯುತ್ತಿದೆ. ಸಿದ್ದರಾಮಯ್ಯರವರು ಈ ಹಿಂದೆ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಕೈಗೊಂಡಿದ್ದ “ಜಾತಿಗಣತಿ ಕಾಂತರಾಜ್ ಆಯೋಗ ವರದಿ ಸಮೀಕ್ಷೆ ಪೂರ್ಣಗೊಂಡಿತ್ತು. ಮತ್ತೊಮ್ಮೆ ಸಿದ್ದರಾಮಯ್ಯರವರೇ ಮುಖ್ಯಮಂತ್ರಿಗಳಾಗಿದ್ದಾರೆ. ಆದಕಾರಣ ಹಿಂದುಳಿದ ಸಮುದಾಯಗಳಿಗೆ ಹೆಚ್ಚಿನ ರೀತಿಯಲ್ಲಿ ಅನುಕೂಲ ತಂದುಕೊಡಬಲ್ಲ “ಜಾತಿಗಣತ’ ವರದಿಯನ್ನು ಆದಷ್ಟು ಬೇಗ ಬಿಡುಗಡೆ ಮಾಡಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದರು.

ನೇಕಾರ ಸಮುದಾಯಗಳು ಸಂಘಟನೆ ಹಾಗೂ ಅಭಿವೃದ್ಧಿ ಉದ್ದೇಶದಿಂದ ಫೆಬ್ರುವರಿ ತಿಂಗಳಿನಲ್ಲಿ ಬಾಗಲಕೋಟೆಯಲ್ಲಿ “ಬೃಹತ್ ನೇಕಾರರ ಸಮುದಾಯಗಳ ಸಮಾವೇಶವನ್ನು” ಆಯೋಜಿಸಿಕೊಂಡಿದೆ. ಈ ಸಮಾವೇಶಕ್ಕೆ ಮುಖ್ಯ ಮಂತ್ರಿ ಸಿದ್ದರಾಮಯ್ಯರವರನ್ನು ಉದ್ಘಾಟನೆಗೆ ಆಹ್ವಾನಿಸಲಾಗುವುದು. ಬೃಹತ್ ಸಂಖ್ಯೆಯಲ್ಲಿ ನೇಕಾರರು ಬಾಗಲಕೋಟೆ, ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಗದಗ-ಬೆಟಗೇರಿ, ಹಾವೇರಿ, ನೃಬಿಜಾಪುರ, ಕೊಪ್ಪಳ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ನೇಕಾರರು ಬಾಗವಹಿಸಲಿದ್ದಾರೆ. ನೇಕಾರ ಸಮುದಾಯಗಳ ಒಕ್ಕೂಟದಿಂದ ಸರ್ಕಾರಕ್ಕೆ ವಿವಿಧ ಬೇಡಿಕೆಗಳ ಬಗ್ಗೆ ಮನವಿಯನ್ನು ಸಲ್ಲಿಸಲಾಗುವುದು ಎಂದರು.

ರವೀಂದ್ರ‌ ಕಲಬುರ್ಗಿ ಮಾತನಾಡಿ, ನೇಕಾರ ನಿಗಮ ಕಾರ್ಯಕ್ಕೆ ಬಂದಿದೆ. ಆದರೆ ಕೆಲಸಕ್ಕೆ ಚಾಲನೆ ಸಿಕ್ಕಿಲ್ಲ, ಅದನ್ನು ಪ್ರಾರಂಭುಸಲು ಅನುದಾನ ನೀಡುವ ಮೂಲಕ ನೇಕಾರ ಸಮುದಾಯ ಅಭಿವೃದ್ಧಿಗೆ ಒತ್ತು ನೀಡಬೇಕು.60 ಲಕ್ಷ ಜನ ಇದ್ದೇವೆ ನಿಗಮ ಮಂಡಳಗಳಲ್ಲಿ‌ ಸ್ಥಾನ ನೀಡಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದರು.

ಡಿಸಿಸಿ ಬ್ಯಾಂಕ ಉಪಾಧ್ಯಕ್ಷ ಮುರಗೇಶ ಕಡ್ಲಿಮಟ್ಟಿ, ಮನೋಹರ ರಕ್ಕಸಗಿ,‌ವಿರೇಶ ಶಿರಗಣ್ಣವರ,ತೋಟಪ್ಪ, ಭಾಗ್ಯಾಶ್ರೀ ಹಂಡಿ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!