ಮಹಿಳೆಯ ಮೇಲೆ ಮೂತ್ರ ವಿಸರ್ಜನೆ: ನನಗೆ ಕುಟುಂಬ ಇದೆ ದೂರು ಕೊಡಬೇಡಿ ಎಂದು ಬೇಡಿಕೊಂಡ ಆರೋಪಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

Air India ವಿಮಾನದಲ್ಲಿ ಇತ್ತೀಚೆಗೆ ಮಹಿಳೆಯ ಮೇಲೆ ಮೂತ್ರ ವಿಸರ್ಜಿಸಿದ್ದ ಆರೋಪಿ ದೂರು ಕೊಡಬೇಡಿ ಎಂದು ಬೇಡಿ ಕೊಂಡ ಘಟನೆ ನಡೆದಿದೆ.

ತನಗೆ ಕುಟುಂಬವಿದೆ ದಯವಿಟ್ಟು ನನ್ನ ಮೇಲೆ ದೂರು ಕೊಡಬೇಡಿ ಎಂದು ಆರೋಪಿ ಬೇಡಿಕೊಂಡಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ. ಒಂದೊಮ್ಮೆ ದೂರು ಕೊಟ್ಟರೆ ತನ್ನ ಹೆಂಡತಿ ಹಾಗೂ ಮಗುವಿಗೆ ತೊಂದರೆಯಾಗುತ್ತದೆ ಎಂದು ಕೇಳಿಕೊಂಡಿದ್ದನು.

ಮಹಿಳೆ ಏರ್ ಇಂಡಿಯಾಗೆ ನೀಡಿದ ದೂರಿನ ಆಧಾರದ ಮೇಲೆ ದೆಹಲಿ ಪೊಲೀಸರು ಆರೋಪಿಯ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, ಅದರಲ್ಲಿ ಆರೋಪಿ ತನ್ನ ವಿರುದ್ಧ ಕೇಸ್ ದಾಖಲಿಸಬೇಡಿ ಎಂದು ಕೇಳಿಕೊಂಡಿರುವ ವಿಷಯ ಉಲ್ಲೇಖಿಸಲಾಗಿದೆ.

ಮಹಿಳೆ ತನ್ನ ಇಚ್ಛೆಯ ವಿರುದ್ಧವಾಗಿ ಆರೋಪಿಯೊಂದಿಗೆ ಮಾತುಕತೆ ನಡೆಸಿ, ರಾಜಿ ಮಾಡಿಕೊಳ್ಳುವಂತೆ ತನಗೆ ಒತ್ತಾಯಿಸಲಾಯಿತು ಎಂದು ಹೇಳಲಾಗಿದೆ.

ಇತ್ತ ಏರ್ ಇಂಡಿಯಾ ವಿಮಾನದಲ್ಲಿ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ ಆರೋಪಿ ಪತ್ತೆಗಾಗಿ ಲುಕ್‌ಔಟ್‌ ನೋಟಿಸ್‌ ಹೊರಡಿಸಲಾಗಿದೆ.

ಆರೋಪಿಯನ್ನು ಮುಂಬೈ ನಿವಾಸಿ ಎಸ್.ಮಿಶ್ರಾ ಎಂದು ಗುರುತಿಸಲಾಗಿದೆ. ಈತ ಕಳೆದ ವರ್ಷ ನವೆಂಬರ್ 26 ರಂದು ಅಮೆರಿಕದ ನ್ಯೂಯಾರ್ಕ್‌ನಿಂದ ದಿಲ್ಲಿಗೆ ಬರುತ್ತಿದ್ದ ವಿಮಾನದಲ್ಲಿ ಸುಮಾರು 70 ವರ್ಷದ ವೃದ್ಧೆ ಮೇಲೆ ಆತ ಮೂತ್ರ ವಿಸರ್ಜನೆ ಮಾಡಿದ್ದಾನೆ ಎನ್ನಲಾಗಿದೆ. ಆರೋಪಿಯನ್ನು ಶೀಘ್ರದಲ್ಲಿಯೇ ಬಂಧಿಸಲಾಗುವುದು ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!