ಮಹಿಳೆ ಮೇಲೆ ಮೂತ್ರ ವಿಸರ್ಜನೆ: ಆರೋಪಿಯನ್ನು ಕೆಲಸದಿಂದ ವಜಾಗೊಳಿಸಿದ ಕಂಪನಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜಿಸಿದ ಪ್ರಕರಣ ಸಂಬಂಧ ಆರೋಪಿ ಶಂಕರ್​ನನ್ನು ಕಂಪನಿಯು ಕೆಲಸದಿಂದ ವಜಾಗೊಳಿಸಿದೆ.

ವೆಲ್ಸ್​ ಫಾರ್ಗೋ ಉದ್ಯೋಗಿಗಳು ವೃತ್ತಿಪರ ಹಾಗೂ ವೈಯಕ್ತಿಕವಾಗಿ ಉತ್ತಮ ನಡವಳಿಕೆಯನ್ನು ಹೊಂದಿದ್ದಾರೆ, ಇವರ ಮೇಲಿನ ಆರೋಪಗಳು ಕಂಪನಿಗೆ ಕೆಟ್ಟ ಹೆಸರನ್ನು ತಂದಿದೆ ಹೀಗಾಗಿ ಅವರನ್ನು ಕೆಲಸದಿಂದ ವಜಾ ಮಾಡುತ್ತಿರುವುದಾಗಿ ಕಂಪನಿ ಹೇಳಿಕೆಯಲ್ಲಿ ತಿಳಿಸಿದೆ.

ಸದ್ಯ ಶಂಕರ್ ನಾಪತ್ತೆಯಾಗಿದ್ದು ಆತನನ್ನು ಹುಡುಕಲು ಲುಕ್​ಔಟ್ ನೋಟಿಸ್ ಜಾರಿ ಮಾಡಲಾಗಿದೆ.

ನವೆಂಬರ್ 26 ರಂದು ಆರೋಪಿ ಶಂಕರ್ ನ್ಯೂಯಾರ್ಕ್​-ದೆಹಲಿ ಏರ್​ ಇಂಡಿಯಾ ವಿಮಾನದಲ್ಲಿ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ. ಬಳಿಕ ತನ್ನ ಮೇಲೆ ದೂರು ನೀಡಬೇಡಿ, ನನಗೆ ಹೆಂಡತಿ, ಮಕ್ಕಳು ಇದ್ದಾರೆ ಅವರ ಮೇಲೆ ಪರಿಣಾಮ ಬೀರುತ್ತೆ ಎಂದು ಬೇಡಿಕೊಂಡಿದ್ದನು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here