ಮಹಿಳೆ ಮೇಲೆ ಮೂತ್ರ ವಿಸರ್ಜನೆ ಪ್ರಕರಣ: ಆರೋಪಿಯ ಜಾಮೀನು ಆದೇಶ ಕಾಯ್ದಿರಿಸಿದ ದೆಹಲಿ ಕೋರ್ಟ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಮೇಲೆ ಬಂಧಿತರಾಗಿರುವ ಉದ್ಯಮಿ ಶಂಕರ್ ಮಿಶ್ರಾ ಅವರ ಜಾಮೀನು ಅರ್ಜಿಯ ತೀರ್ಪನ್ನು ದೆಹಲಿ ನ್ಯಾಯಾಲಯ ಸೋಮವಾರ ಜನವರಿ 31ಕ್ಕೆ ಕಾಯ್ದಿರಿಸಿದೆ.

ಮಿಶ್ರಾ ಅವರ ಜಾಮೀನು ಅರ್ಜಿಯನ್ನು ವಿರೋಧಿಸಿರುವ ಪೊಲೀಸರು, ಘಟನೆಯಿಂದಾಗಿ ಭಾರತಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನಹಾನಿಯಾಗಿದೆ ಎಂದು ವಾದಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಕೋರ್ಟ್, ಇದು ಅಸಹ್ಯಕರವಾಗಿರಬಹುದು ಆದರೆ ಅದು ಇನ್ನೊಂದು ವಿಷಯ, ಅದರೊಳಗೆ ಹೋಗಬಾರದು.ಕಾನೂನು ಅದನ್ನು ಹೇಗೆ ಎದುರಿಸುತ್ತದೆ ಎಂಬುದನ್ನು ನೋಡೋಣ ಎಂದು ನ್ಯಾಯಾಧೀಶರು ಹೇಳಿದರು.
ಪ್ರಾಸಿಕ್ಯೂಷನ್ ಹೆಸರಿಸಿದ ಸಾಕ್ಷಿಗಳು ನಿಮ್ಮ (ಪೊಲೀಸ್) ಪರವಾಗಿ ಹೇಳಿಕೆ ನೀಡುತ್ತಿಲ್ಲ ಎಂದು ನ್ಯಾಯಾಧೀಶರು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!