ಮಹಿಳೆ ಮೇಲೆ ಮೂತ್ರ ವಿಸರ್ಜನೆ ಪ್ರಕರಣ: ಏರ್ ಇಂಡಿಯಾ ಸಿಬ್ಬಂದಿಗೆ ಶೋಕಾಸ್ ನೋಟಿಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಹಿಳೆ ಮೇಲೆ ಮೂತ್ರ ವಿಸರ್ಜನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಏರ್ ಇಂಡಿಯಾ ವಿಮಾನದ ಸಿಬ್ಬಂದಿ ಕರ್ತವ್ಯ ಲೋಪಕ್ಕೆ ಪ್ರಯಾಣಿಕರಿಗೆ ಶಿಕ್ಷೆ ಏಕೆ ಎಂದು ಡಿಜಿಸಿಎ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

ವಿಮಾನದ ಪೈಲಟ್ ಗಳು, ಕ್ಯಾಬಿನ್ ಸಿಬ್ಬಂದಿ ಕರ್ತವ್ಯ ಲೋಪವಾಗಿದ್ದು, ಇವರ ವಿರುದ್ಧ ಏಕೆ ಕ್ರಮ ಕೈಗೊಳ್ಳಬಾರದು ಎಂದು ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ. ವಿಮಾನಯಾನ ಸಚಿವಾಲಯದ ನಿರ್ದೇಶಕರಿಂದ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ.

ಪೈಲಟ್ ಗಳು ಮತ್ತು ಕ್ಯಾಬಿನ್ ಸಿಬ್ಬಂದಿಯಿಂದ ಕರ್ತವ್ಯ ಲೋಪವಾಗಿದೆ. ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ. ವಿಮಾನದಲ್ಲಿ ಅಶಿಸ್ತಿನ ಪ್ರಯಾಣಿಕರ ನಿರ್ಬಂಧಿಸಬೇಕಿತ್ತು. ಏರ್ ಇಂಡಿಯಾ ನಡವಳಿಕೆಗಳು ವೃತ್ತಿಪರವಾಗಿಲ್ಲ ಎಂದು ಡಿಜಿಸಿಎ ನಿರ್ದೇಶಕರು ನೋಟಿಸ್ ಜಾರಿ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!