Thursday, February 9, 2023

Latest Posts

ಅಮೆರಿಕದಲ್ಲಿ ನಿಲ್ಲದ ಗುಂಡಿನ ದಾಳಿ: ಯಾಕಿಮಾದ ಶೂಟ್‌ಔಟ್‌ನಲ್ಲಿ ಮೂವರು ಬಲಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಅಮೆರಿಕದ ವಾಷಿಂಗ್ಟನ್ ರಾಜ್ಯದ ಯಾಕಿಮಾ ನಗರದ ಕನ್ವೀನಿಯನ್ಸ್ ಸ್ಟೋರ್‌ನಲ್ಲಿ ಮತ್ತೊಂದು ಶೂಟ್‌ಔಟ್‌ ನಡೆದಿದೆ. ದಾಳಿಯಲ್ಲಿ ಕನಿಷ್ಠ 3 ಜನರು ಸಾವನ್ನಪ್ಪಿದ್ದಾರೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ. ಬಂದೂಕುಧಾರಿ ಅಂಗಡಿಯೊಂದರಲ್ಲಿ 21 ಜನರ ಮೇಲೆ ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಗುಂಡಿನ ದಾಳಿಯು ಸಂತ್ರಸ್ತರು ಮತ್ತು ಬಂದೂಕುಧಾರಿ ನಡುವೆ ಯಾವುದೇ ಸಂಘರ್ಷಗಳಿಲ್ಲ ಎಂದು ಸ್ಪಷ್ಟಪಡಿಸಿದರು. ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಅಮೆರಿಕದ ಉತ್ತರ ಕ್ಯಾಲಿಫೋರ್ನಿಯಾದ ಹಾಫ್ ಮೂನ್ ಬೇ ಪ್ರದೇಶದ ಎರಡು ಸ್ಥಳಗಳಲ್ಲಿ ಮಂಗಳವಾರ ಗುಂಡಿನ ದಾಳಿ ನಡೆದ ಕೆಲವೇ ಗಂಟೆಗಳ ನಂತರ ಈ ದುರಂತ ಘಟನೆ ನಡೆದಿದೆ, ಇದರಲ್ಲಿ 7 ಜನರು ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!