ನಾರ್ತ್ ಕೆರೊಲಿನಾ ವಿವಿ ಕ್ಯಾಂಪಸ್​ನಲ್ಲಿ ಪ್ರೊಫೆಸರ್​​​ ಗುಂಡಿಕ್ಕಿ ಹತ್ಯೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಚಾಪೆಲ್ ಹಿಲ್‌ನಲ್ಲಿರುವ ನಾರ್ತ್ ಕೆರೊಲಿನಾ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಅಧ್ಯಾಪಕರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಸೋಮವಾರ ನಡೆದಿದೆ.

ಸೋಮವಾರ ಮಧ್ಯಾಹ್ನ ವಿವಿಯ ಕೌಡಿಲ್ ಪ್ರಯೋಗಾಲಯದಲ್ಲಿ ಗುಂಡು ಹಾರಿಸಲಾಗಿದೆ ಎಂದು ವರದಿಯಾಗಿದೆ. ಘಟನೆಯ ಬಳಿಕ ವಿವಿ ಚಾನ್ಸೆಲರ್ ಕೆವಿನ್ ಗುಸ್ಕಿವಿಕ್ಜ್, ಅಧ್ಯಾಪಕರಿಗೆ ಗುಂಡಿಕ್ಕಿದ ಶಂಕಿತನನ್ನು ಬಂಧಿಸಲಾಗಿದೆ ಎಂದು ಹೇಳಲಾಗಿದೆ.

ಶಂಕಿತನ ಮತ್ತು ಅಧ್ಯಾಪಕರ ಹೆಸರುಗಳನ್ನು ತಕ್ಷಣವೇ ಬಹಿರಂಗಪಡಿಸಲಾಗಿಲ್ಲ. ಯುಎನ್‌ಸಿ ಪೊಲೀಸ್ ಮುಖ್ಯಸ್ಥ ಬ್ರಿಯಾನ್ ಜೇಮ್ಸ್ ಸೋಮವಾರ ರಾತ್ರಿ ಹೇಳಿಕೆ ನೀಡಿದ್ದು, ಹತ್ಯೆಯ ಹಿಂದಿನ ಉದ್ದೇಶವನ್ನು ನಿರ್ಧರಿಸಲು ಇನ್ನು ತುಂಬಾ ಸಮಯಬೇಕಾಗಬಹುದು. ಈಗಲೇ ಏನನ್ನೂ ಹೇಳಲು ಸಾಧ್ಯವಿಲ್ಲ. ಘಟನೆಯ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಜೇಮ್ಸ್​ ಹೇಳಿದ್ದಾರೆ.

ಈ ಘಟನೆ ಹಿನ್ನೆಲೆಯಲ್ಲಿ ಮಂಗಳವಾರದಂದು ತರಗತಿಗಳು ಮತ್ತು ಕ್ಯಾಂಪಸ್ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ.

ಸುಮಾರು 32,000 ವಿದ್ಯಾರ್ಥಿಗಳು ಈ ವಿಶ್ವವಿದ್ಯಾನಿಲಯದಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಜೊತೆಗೆ 4,000 ಅಧ್ಯಾಪಕರು ಮತ್ತು 9,000 ಸಿಬ್ಬಂದಿ ಸಿಬ್ಬಂದಿ ಇಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು CNN ವರದಿ ಮಾಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!