Saturday, September 23, 2023

Latest Posts

ಪರಮಾಣು ಶಸ್ತ್ರಾಸ್ತ್ರ ಸಾಮರ್ಥ್ಯ ತ್ವರಿತ ಹೆಚ್ಚಳ: ಯುಎಸ್ ವರದಿ ನಿರಾಕರಿಸಿದ ಚೀನಾ

ಹೊಸದಿಗಂತ ಡಿಜಿಟಲ್ ಡೆಸ್ಕ್

ಬೀಜಿಂಗ್: ಚೀನಾ ತನ್ನ ಪರಮಾಣು ಶಸ್ತ್ರಾಸ್ತ್ರಗಳ ಸಂಗ್ರಹವನ್ನು ವೇಗವಾಗಿ ವಿಸ್ತರಿಸುತ್ತಿದೆ ಎಂಬ ಅಮೆರಿಕದ ವರದಿಯನ್ನು ಚೀನಾದ ವಿದೇಶಾಂಗ ಸಚಿವಾಲಯದ ಶಸ್ತ್ರಾಸ್ತ್ರ ನಿಯಂತ್ರಣ ವಿಭಾಗದ ಮಹಾನಿರ್ದೇಶಕ ಫು ಕಾಂಗ್ ನಿರಾಕರಿದ್ದಾರೆ. ಇದೇ ವೇಳೆ ಚೀನಾ ತನ್ನ ಪರಮಾಣು ಶಸ್ತ್ರಾಸ್ತ್ರಗಳ ಅಗತ್ಯವನ್ನು ಕಡಿಮೆ ಮಾಡಲು ಪ್ರಯತ್ನಿಸುತ್ತಿದೆ ಎಂದವರು ಹೇಳಿದ್ದಾರೆ.

ಇದೇ ವೇಳೆ ಶತ್ರುಗಳನ್ನು ದಾಳಿಯಿಂದ ತಡೆಯುವ ಅಗತ್ಯವಿದೆ. ಹೀಗಾಗಿ ಚೀನಾ ತನ್ನ ಪರಮಾಣು ಶಸ್ತ್ರಾಸ್ತ್ರ ರಾಷ್ಟ್ರೀಯ ರಕ್ಷಣೆಗೆ ಕಡ್ಡಾಯವಾಗಿರುವ ಕನಿಷ್ಠ ಗುರಿಯನ್ನು ತಲುಪುವಂತೆ ಖಚಿತಪಡಿಸಿಕೊಳ್ಳಲು ಕೆಲಸ ಮಾಡುತ್ತಿದೆ ಎಂದೂ ಕಾಂಗ್ ಹೇಳಿದ್ದಾರೆ.

ನಿನ್ನೆಯಷ್ಟೇ ಚೀನಾ, ಅಮೆರಿಕ, ರಷ್ಯಾ, ಬ್ರಿಟನ್ ಮತ್ತು ಫ್ರಾನ್ಸ್ ಪರಮಾಣು ಯುದ್ಧ ಅಥವಾ ಶಸ್ತ್ರಾಸ್ತ್ರ ಸ್ಪರ್ಧೆಯನ್ನು ತಡೆಯುವ ಕುರಿತು ಜಂಟಿ ಹೇಳಿಕೆಯನ್ನು ನೀಡಿದ್ದವು.

ಯುಎಸ್ ರಕ್ಷಣಾ ಇಲಾಖೆ ನವೆಂಬರ್‌ನಲ್ಲಿ ಬಿಡುಗಡೆ ಮಾಡಿದ ವರದಿಯಲ್ಲಿ, ಚೀನಾ ತನ್ನ ಪರಮಾಣು ಸಾಮರ್ಥ್ಯವನ್ನು ಹಿಂದೆ ಅಂದಾಜಿಸುವುದಕ್ಕಿಂತ ಹೆಚ್ಚು ವೇಗವಾಗಿ ವಿಸ್ತರಿಸುತ್ತಿದೆ. ಅಲ್ಲದೇ 2030ರ ವೇಳೆಗೆ 1000 ಕ್ಕೂ ಹೆಚ್ಚು ಪರಮಾಣು ಶಸ್ತ್ರಾಸ್ತ್ರಗಳನ್ನು ಹೊಂದಬಹುದು ಎಂದು ತಿಳಿಸಿದೆ. ಅಮೆರಿಕ 3,750 ಪರಮಾಣು ಶಸ್ತ್ರಾಸ್ತ್ರಗಳನ್ನು ಹೊಂದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!