ಭಾರತಕ್ಕೆ ಮುಂಬೈ ದಾಳಿ ಆರೋಪಿ ತಹವ್ವುರ್ ರಾಣಾ ಹಸ್ತಾಂತರ: ಅಮೆರಿಕ​ ಸಮ್ಮತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

2008ರ ಮುಂಬೈ ದಾಳಿಯಲ್ಲಿ ಭಾಗಿಯಾಗಿದ್ದ ಪಾಕಿಸ್ತಾನ ಮೂಲದ ಕೆನಡಾ ಉದ್ಯಮಿ ತಹವ್ವುರ್ ರಾಣಾ ಎಂಬಾತನನ್ನು ಭಾರತಕ್ಕೆ ಹಸ್ತಾಂತರಿಸಲು ಯುಎಸ್‌ಎ ನ್ಯಾಯಾಲಯ ಸಮ್ಮತಿಸಿದೆ.

ರಾಣಾನನ್ನು ಹಸ್ತಾಂತರಿಸುವಂತೆ ಭಾರತ ಮನವಿ ಮಾಡಿತ್ತು, ಆದಕಾರಣ ಅಮೆರಿಕ ಆತನನ್ನು ಕಳೆದ ವರ್ಷ ಜೂನ್‌ 10ರಂದು ಬಂಧಿಸಿತ್ತು. ತಹವ್ವುರ್​ ರಾಣಾ 2008ರಲ್ಲಿ ಮುಂಬೈನಲ್ಲಿ ನಡೆದ ಸರಣಿ ಬಾಂಬ್​ ಸ್ಪೋಟ ಪ್ರಕರಣದಲ್ಲಿ ಭಾಗಿಯಾಗಿದ್ದ. ಅತ್ಯಂತ ಕ್ರೂರವಾಗಿ ದಾಳಿ ಮಾಡಿದ್ದ 10 ಮಂದಿ ಪಾಕಿಸ್ತಾನಿ ಭಯೋತ್ಪಾದಕರು, ಆರು ಮಂದಿ ಅಮೆರಿಕನ್ನರು ಸೇರಿ ಸುಮಾರು 160 ಮಂದಿಯನ್ನು ದಾರುಣವಾಗಿ ಹತ್ಯೆ ಮಾಡಿದ್ದರು.

ಭಾರತ ಸಲ್ಲಿಸಿರುವ ಮನವಿ ಪುರಸ್ಕರಿಸಿರುವ ಯುಎಸ್ ಕೋರ್ಟ್​ ಎಲ್ಲ ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲಿಸಿದೆ. ಆರೋಪಿಯ ವಿರುದ್ಧ ಪ್ರಸ್ತುತಪಡಿಸಿರುವ ವಾದಗಳನ್ನು ಪರಿಗಣಿಸಲಾಗಿದೆ ಎಂದು ನ್ಯಾಯಾಧೀಶ ಜಾಕ್ವೆಲಿನ್​​ ಚೂಲ್ಜಿಯಾನ್​​ ಹೇಳಿದರು. ರಾಜತಾಂತ್ರಿಕ ಮಾರ್ಗಗಳ ಮೂಲಕ ಅವರನ್ನು ಭಾರತಕ್ಕೆ ಕರೆತರಲು ಪ್ರಕ್ರಿಯೆಗಳನ್ನು ಪ್ರಾರಂಭಿಸಲು ಸಿದ್ಧ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತಿಳಿಸಿದೆ.

ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರು ನಡೆಸಿದ 26/11 ದಾಳಿಯಲ್ಲಿ ರಾಣಾ ಪಾತ್ರದ ಬಗ್ಗೆ ಎನ್‌ಐಎ ತನಿಖೆ ನಡೆಸುತ್ತಿದೆ. ಮುಂಬೈ ಭಯೋತ್ಪಾದಕ ದಾಳಿಯಲ್ಲಿ ಆರು ಮಂದಿ ಅಮೆರಿಕನ್ನರು ಸೇರಿದಂತೆ ಒಟ್ಟು 166 ಜನರು ಸಾವನ್ನಪ್ಪಿದ್ದರು. ಈ ದಾಳಿಯನ್ನು 10 ಪಾಕಿಸ್ತಾನಿ ಭಯೋತ್ಪಾದಕರು ನಡೆಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!