Friday, July 1, 2022

Latest Posts

ಕಾಬೂಲ್‌ನಲ್ಲಿ ಸೂಸೈಡ್ ಬಾಂಬರ್ ಮೇಲೆ ಡ್ರೋನ್ ದಾಳಿ ನಡೆಸಿದ ಯುಎಸ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಅಫ್ಘಾನಿಸ್ತಾನದ ಕಾಬೂಲ್‌ನಲ್ಲಿ ವಿಮಾನ ನಿಲ್ದಾಣದ ಮೇಲೆ ದಾಳಿ ನಡೆಸಲು ಸಿದ್ಧತೆ ನಡೆಸುತ್ತಿದ್ದ ಐಸಿಸ್ ಕಾರ್ ಬಾಂಬರ್‌ನನ್ನು ಹತ್ಯೆ ಮಾಡಲಾಗಿದೆ ಎಂದು ಅಮೆರಿಕ ಹೇಳಿದೆ.
ಕಾಬೂಲ್‌ನ ವಸತಿ ನೆರೆಹೊರೆಯಲ್ಲಿ ವಾಹನಗಳನ್ನು ಗುರಿಯಾಗಿಸಿಕೊಂಡು ನಡೆದ ಡ್ರೋನ್  ದಾಳಿಯಲ್ಲಿ ಮೂವರು ಮಕ್ಕಳು ಮೃತಪಟ್ಟಿದ್ದಾರೆ.
ಡ್ರೋನ್ ಸ್ಟ್ರೈಕ್ ಬಗ್ಗೆ ಅಮೆರಿಕದ ಕೇಂದ್ರ ಕಮಾಂಡ್‌ನ ವಕ್ತಾರ ಕ್ಯಾಪ್ಟನ್ ಬಿಲ್ ಅರ್ಬನ್ ಮಾತನಾಡಿ, ವಾಹನದ ಮೇಲೆ ಡ್ರೋನ್ ದಾಳಿ ನಡೆದ ಬಳಿಕ ಉಂಟಾಗಿರುವ ಸಾವು ನೋವುಗಳ ಬಗ್ಗೆ ನಮಗೆ ಅರಿವಿದೆ ಎಂದು ಹೇಳಿದ್ದಾರೆ.
ಡ್ರೋನ್ ದಾಳಿಯಿಂದ ಏರ್‌ಪೋರ್ಟ್‌ಗೆ ಬಂದೊದಗಿದ್ದ ಬಹುದೊಡ್ಡ ಆಪತ್ತು ನಿವಾರಣೆಯಾಗಿದೆ ಎಂದು ಅಮೆರಿಕ ಹೇಳಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss