ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಿಕ್ಷಣ ಇಲಾಖೆಯನ್ನು ಸ್ಥಗಿತಗೊಳಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸುವ ಕಾರ್ಯಕಾರಿ ಆದೇಶಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುರುವಾರ ಸಹಿ ಹಾಕಿದ್ದಾರೆ.
ಪೆಲ್ ಗ್ರಾಂಟ್ಸ್ ಮತ್ತು ವಿಕಲಚೇತನ ಮಕ್ಕಳಿಗೆ ನೀಡುವ ಶೀರ್ಷಿಕೆ, ನಿಧಿಯಂತಹ ಅಗತ್ಯ ಕಾರ್ಯಕ್ರಮಗಳನ್ನು ಸಂರಕ್ಷಿಸಿ ಇತರ ಸಂಸ್ಥೆಗಳಿಗೆ ಮರು ನಿಯೋಜಿಸಲಾಗುವುದು ಎಂದು ಹೇಳಲಾಗಿದ್ದು, ಕಳೆದ ನಾಲ್ಕು ದಶಕಗಳಲ್ಲಿ ಭಾರಿ ಖರ್ಚು ಹೆಚ್ಚಳದ ಹೊರತಾಗಿಯೂ ಒಟ್ಟಾರೆ ಇಲಾಖೆಯು ಶಿಕ್ಷಣವನ್ನು ಸುಧಾರಿಸುವಲ್ಲಿ ವಿಫಲವಾಗಿದೆ ಎಂದು ಹೇಳಿದ್ದಾರೆ.
ಶಿಕ್ಷಣ ಇಲಾಖೆ ಬಂದ್ ಮಾಡಿ ಶಾಲಾ ನೀತಿಯನ್ನು ಸಂಪೂರ್ಣವಾಗಿ ರಾಜ್ಯಗಳಿಗೆ ನೀಡುತ್ತೇನೆ ಎಂದು ಟ್ರಂಪ್ ಈ ಹಿಂದೆ ಹೇಳಿದ್ದರು. ಈ ಭರವಸೆಯಂತೆ ಶಿಕ್ಷಣ ಇಲಾಖೆಯ ಟ್ರಂಪ್ ಮುಚ್ಚಿದ್ದರಿಂದ ಇನ್ನು ಮುಂದೆ ಶಿಕ್ಷಣದಲ್ಲಿ ಅಮೆರಿಕ ಸರ್ಕಾರದ ಹಸ್ತಕ್ಷೇಪ ಇರುವುದಿಲ್ಲ. ಸಂಪೂರ್ಣವಾಗಿ ರಾಜ್ಯಗಳಿಗೆ ಅಧಿಕಾರ ಇರಲಿದೆ ಎಂದು ತಿಳಿಸಿದ್ದಾರೆ.