March 27, 2026
Friday, March 27, 2026
spot_img

ಮಾತುಕತೆಗೆ ಮಣಿದ ಅಮೆರಿಕ ಅಧ್ಯಕ್ಷ: ಏ.6ರವರೆಗೆ ಇರಾನ್ ಇಂಧನ ಕೇಂದ್ರಗಳು ಸೇಫ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಧ್ಯಪ್ರಾಚ್ಯದಲ್ಲಿ ಹೊತ್ತಿ ಉರಿಯುತ್ತಿರುವ ಯುದ್ಧದ ಜ್ವಾಲೆಯನ್ನು ಆರಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈಗ ‘ಶಾಂತಿ ಸಂಧಾನ’ದ ಹಾದಿ ಹಿಡಿದಿದ್ದಾರೆ. ಇರಾನ್ ಸರ್ಕಾರದ ಮನವಿಗೆ ಸ್ಪಂದಿಸಿರುವ ಟ್ರಂಪ್, ಆ ದೇಶದ ಇಂಧನ ಕೇಂದ್ರಗಳ ಮೇಲಿನ ದಾಳಿಯನ್ನು ಮತ್ತೆ 10 ದಿನಗಳ ಕಾಲ ಸ್ಥಗಿತಗೊಳಿಸುವುದಾಗಿ ಘೋಷಿಸಿದ್ದಾರೆ.

ತಮ್ಮ ಸಾಮಾಜಿಕ ಜಾಲತಾಣವಾದ ‘ಟ್ರೂತ್ ಸೋಷಿಯಲ್’ನಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಟ್ರಂಪ್, “ಇರಾನ್ ಸರ್ಕಾರದ ಕೋರಿಕೆಯ ಮೇರೆಗೆ ಇಂಧನ ಸ್ಥಾವರಗಳ ನಾಶವನ್ನು ಏಪ್ರಿಲ್ 6ರ ರಾತ್ರಿ 8 ಗಂಟೆಯವರೆಗೆ ತಾತ್ಕಾಲಿಕವಾಗಿ ನಿಲ್ಲಿಸಲಾಗುತ್ತಿದೆ. ಇದು ಉಭಯ ದೇಶಗಳ ನಡುವಿನ ಮಾತುಕತೆಗೆ ಹೆಚ್ಚಿನ ಅವಕಾಶ ಮಾಡಿಕೊಡಲಿದೆ,” ಎಂದು ತಿಳಿಸಿದ್ದಾರೆ.

ಇರಾನ್ ಸಂಧಾನಕ್ಕೆ ಒಪ್ಪುತ್ತಿಲ್ಲ ಎಂಬ ಮಾಧ್ಯಮಗಳ ವರದಿಯನ್ನು ಟ್ರಂಪ್ ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ. “ಅಮೆರಿಕ ಮತ್ತು ಇರಾನ್ ನಡುವೆ ಮಾತುಕತೆಗಳು ಅತ್ಯಂತ ಸಕಾರಾತ್ಮಕವಾಗಿ ನಡೆಯುತ್ತಿವೆ. ಈ ಪ್ರಕ್ರಿಯೆಯು ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ,” ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಹತ್ತು ದಿನಗಳ ಕದನ ವಿರಾಮವು ಇಡೀ ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪನೆಗೆ ಅಡಿಪಾಯವಾಗಲಿದೆಯೇ ಎಂಬುದನ್ನು ಜಗತ್ತು ಕಾತರದಿಂದ ನೋಡುತ್ತಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !